ಕಾಸರಗೋಡು: ಜಿಲ್ಲೆ ಸೇರಿದಂತೆ ಕೇರಳಾದ್ಯಂತ ಮಳೆ ಮತ್ತೆ ಬಿರುಸುಪಡೆದುಕೊಳ್ಳಲಾರಂಭಿಸಿದೆ. ಅ. 17ರಂದು ಕಾಸರಗೋಡು ಹಾಗೂ ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಜಿಲ್ಲೆಯಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಜಿಲ್ಲೆ ಸೇರಿದಂತೆ ಕೇರಳಾದ್ಯಂತ ಮುಂದಿನ ಐದು ದಿವಸಗಳ ಕಾಲ ಸಾಮಾನ್ಯ ಮಳೆಯಾಗಲಿದೆ.
ಕೇರಳ ಕರಾವಳಿಯಲ್ಲಿ ಜಾಗ್ರತೆ ಪಾಲಿಸುವಂತೆ ರಾಷ್ಟ್ರೀಯ ಸಮುದ್ರಶಾಸ್ತ್ರ ಮತ್ತು ಸಂಶೋಧನಾ ಕೇಂದ್ರ (ಐಎನ್‍ಸಿಓಐಎಸ್) ಎಚ್ಚರಿಸಿದೆ. ಕರಾವಳಿ ಪ್ರದೇಶಗಳು, ವಿಶೇಷವಾಗಿ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಳ್ಳುವ ಯಾ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಯಿದೆ. ಮೀನುಗಾರರೂ ಜಾಗ್ರತೆ ಪಾಲಿಸುವಂತೆ ಸೂಚಿಸಲಾಗಿದೆ.