ತಿರುವನಂತಪುರಂ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತÀದ ಪ್ರಭಾವದಿಂದ ರಾಜ್ಯದ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
12 ರಿಂದ 16 ರವರೆಗೆ ಅಲಲ್ಲಿ ಭಾರೀ ಮಳೆ ಮತ್ತು 17 ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಇಂದು ಪತ್ತನಂತಿಟ್ಟ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ, ಸೋಮವಾರ ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ, ಮಂಗಳವಾರ ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಹಾಗೂ ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಬುಧವಾರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಗುರುವಾರ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಜಾಗರೂಕತೆಯ ಭಾಗವಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ದಿನ ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಳಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸುಳಿಗಾಳಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ. ನಾಳೆಯ ವೇಳೆಗೆ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡವಾಗಿ ಬಲಗೊಳ್ಳುವ ಸಾಧ್ಯತೆ ಇದೆ.
ಮತ್ತೊಂದು ಸೈಕ್ಲೋನಿಕ್ ಪರಿಚಲನೆಯು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ನೆಲೆಗೊಂಡಿದೆ. ಇದೆಲ್ಲದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಕೇರಳದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.