ಮುಂಬೈ: ಬದ್ಲಾಪುರ ಶಾಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್ ಶಿಂದೆ, ಪೊಲೀಸ್ ಶೂಟೌಟ್‌ನಲ್ಲಿ ಹತ್ಯೆಯಾದ ಪ್ರಕರಣದ ತನಿಖಾ ವರದಿಯನ್ನು ನ.18ರ ಒಳಗಾಗಿ ಸಲ್ಲಿಸಬೇಕೆಂದು ಬಾಂಬೆ ಹೈಕೋರ್ಟ್ ಗುರುವಾರ ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶನ ನೀಡಿದೆ.
ಮುಂಬೈ: ಬದ್ಲಾಪುರ ಶಾಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ್ ಶಿಂದೆ, ಪೊಲೀಸ್ ಶೂಟೌಟ್‌ನಲ್ಲಿ ಹತ್ಯೆಯಾದ ಪ್ರಕರಣದ ತನಿಖಾ ವರದಿಯನ್ನು ನ.18ರ ಒಳಗಾಗಿ ಸಲ್ಲಿಸಬೇಕೆಂದು ಬಾಂಬೆ ಹೈಕೋರ್ಟ್ ಗುರುವಾರ ಮ್ಯಾಜಿಸ್ಟ್ರೇಟ್‌ಗೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಹಾಗೂ ಪೃಥ್ವಿರಾಜ್ ಚವಾಣ್ ಅವರನ್ನು ಒಳಗೊಂಡ ಪೀಠವು 'ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ವಿಧಿವಿಜ್ಞಾನ ತಜ್ಞರಿಂದ ಪರಿಶೀಲಿಸುವಂತೆ ಆದೇಶಿಸಿತು. ಅಲ್ಲದೇ ಪ್ರಕರಣದಲ್ಲಿ ಬಲವಾದ ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸುವಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸೂಚಿಸಿತು.
ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿದ ಸಾವಿನ ಪ್ರಕರಣದ ತನಿಖೆಯನ್ನು ಮ್ಯಾಜಿಸ್ಟ್ರೇಟ್ ನಡೆಸಬೇಕೆಂದು ಕಾನೂನು ಹೇಳುತ್ತದೆ. ಪ್ರಕರಣದ ಎಲ್ಲಾ ಸಂಬಂಧಿತ ದಾಖಲೆಗಳನ್ನು ಮ್ಯಾಜಿಸ್ಟ್ರೇಟ್‌ಗೆ ರವಾನಿಸಲಾಗಿದೆ ಎಂದು ಅಡ್ವೊಕೇಟ್ ಜನರಲ್ ಬೀರೇಂದ್ರ ಶರಫ್ ತಿಳಿಸಿದರು.
ಮ್ಯಾಜಿಸ್ಟ್ರೇಟ್ ವಿಚಾರಣೆಯನ್ನು ತ್ವರಿತಗೊಳಿಸಬೇಕು ಹಾಗೂ ನ.18ರಂದು ವರದಿಯನ್ನು ಸಲ್ಲಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ಹೆಣ್ಣುಮಕ್ಕಳ ಮೇಲೆ ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಪ್ರಕರಣದ ಪ್ರಮುಖ ಆರೋಪಿ ಅಕ್ಷಯ್ ಶಿಂದೆಯನ್ನು ಬಂಧಿಸಲಾಗಿತ್ತು. ಪೊಲೀಸರು ಈತನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ.
ಶಿಂದೆ ಹತ್ಯೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ಅಲಹಾಬಾದ್ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ದಿಲೀಪ್ ಭೋಸಲೆ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಿದೆ. ಸಮಿತಿಯು ಮೂರು ತಿಂಗಳಲ್ಲಿ ವರದಿ ಸಲ್ಲಿಸಲಿದೆ.