ಸಿವಾನ್/ಸರನ್: ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ನಕಲಿ ಮದ್ಯ ಕುಡಿದು 20 ಮಂದಿ ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಸಿವಾನ್/ಸರನ್: ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ನಕಲಿ ಮದ್ಯ ಕುಡಿದು 20 ಮಂದಿ ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ನಿನ್ನೆ(ಬುಧವಾರ) ನಕಲಿ ಮದ್ಯ ಸೇವಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದು, 14 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿವಾನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ, 'ಬುಧವಾರ ಬೆಳಗ್ಗೆ 7.30ರ ಸುಮಾರಿಗೆ ಮಘರ್ ಮತ್ತು ಔರಿಯಾ ಪಂಚಾಯತ್‌ಗಳಲ್ಲಿ ಮೂವರು ನಿಗೂಢವಾಗಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಬಂದಿತ್ತು. ತಕ್ಷಣವೇ ಅಧಿಕಾರಿಗಳ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಘಟನೆಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.