ಪಟ್ನಾ: ಬಿಹಾರದಲ್ಲಿ ನಕಲಿ ಮದ್ಯ ಕುಡಿದು 37 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಮಹಿಳೆಯರು ಸೇರಿದಂತೆ 21 ಮಂದಿಯನ್ನು ಬಂಧಿಸಲಾಗಿದೆ.
ಪಟ್ನಾ: ಬಿಹಾರದಲ್ಲಿ ನಕಲಿ ಮದ್ಯ ಕುಡಿದು 37 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಮಹಿಳೆಯರು ಸೇರಿದಂತೆ 21 ಮಂದಿಯನ್ನು ಬಂಧಿಸಲಾಗಿದೆ.
ಕರ್ತವ್ಯಲೋಪ ಎಸಗಿದ ಆರೋಪದಡಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
'ಮಶರಕ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಭಗವಾನ್‌ಪುರ ಪೊಲೀಸ್ ಠಾಣೆಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ' ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ
'ಮಘರ್, ಔರಿಯಾ ಮತ್ತು ಇಬ್ರಾಹಿಂಪುರದ ಮೂವರು ಚೌಕಿದಾರರನ್ನೂ ಜಿಲ್ಲಾಡಳಿತ ಈಗಾಗಲೇ ಅಮಾನತುಗೊಳಿಸಿದೆ' ಎಂದು ಸಾರಣ್ ವಲಯದ ಡಿಐಜಿ ನಿಲೇಶ್ ಕುಮಾರ್ ತಿಳಿಸಿದ್ದಾರೆ.
ಮದ್ಯಪಾನ ನಿಷೇಧ ಜಾರಿಯಲ್ಲಿರುವ ಬಿಹಾರದ ಸಿವಾನ್, ಸಾರಣ್ ಮತ್ತು ಗೋಪಾಲ್ ಗಂಜ್ ಜಿಲ್ಲೆಗಳಲ್ಲಿ ನಕಲಿ ಮದ್ಯ ಕುಡಿದು 37 ಜನ ಮೃತಪಟ್ಟಿದ್ದರು.
'ನಕಲಿ ಮದ್ಯ ತಯಾರಿಕೆ ಮತ್ತು ಪೂರೈಕೆ ಮಾಡಿದ ಸಿವಾನ್ ಜಿಲ್ಲೆಯ 13 ಮಂದಿ ಮತ್ತು ಸಾರಣ್ ಜಿಲ್ಲೆಯ 8 ಜನರನ್ನು ಬಂಧಿಸಲಾಗಿದೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
'ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ.) ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದೆ' ಎಂದು ಡಿಐಜಿ ತಿಳಿಸಿದ್ದಾರೆ.