HEALTH TIPS

ಅಕ್ಟೋಬರ್‌ 23ರಂದು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: ಹವಾಮಾನ ಇಲಾಖೆ

        ಮರಾವತಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ಅ.23ರ ವೇಳೆಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.

         ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ.

     ಇದು ‍ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸುವ ಸಾಧ್ಯತೆ ಇದೆ. ಅ.23ರಂದು ಪೂರ್ವ- ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದೆ.

           ನಂತರ ಚಂಡಮಾರುತವು ವಾಯುವ್ಯಕ್ಕೆ ಚಲಿಸುವ ಸಾಧ್ಯತೆ ಇದ್ದು, ಅ.24ರ ಮುಂಜಾನೆ ಒಡಿಶಾ- ಪಶ್ಚಿಮ ಬಂಗಾಳ ಕರಾವಳಿಯಿಂದ ವಾಯುವ್ಯ ಬಂಗಾಳಕೊಲ್ಲಿಯನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries