ಗಾಝಾ : ಗಾಝಾದ ಜಬಾಲಿಯಾದಲ್ಲಿ ಸ್ಥಳಾಂತರಗೊಂಡವರು ಆಶ್ರಯ ಪಡೆದಿದ್ದ ಶಾಲೆಯೊಂದರ ಮೇಲೆ ಗುರುವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳ ಸಹಿತ ಕನಿಷ್ಠ 28 ಮಂದಿ ಮೃತಪಟ್ಟಿದ್ದು 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಜನರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು ಶಾಲೆಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ ಬೆಂಕಿಯನ್ನು ನಂದಿಸಲು ನೀರು ಅಥವಾ ಅಗ್ನಿಶಾಮಕ ವ್ಯವಸ್ಥೆ ಇಲ್ಲದ ಕಾರಣ ಮಕ್ಕಳ ಸಹಿತ ಕನಿಷ್ಠ 28 ಮಂದಿ ದಹನಗೊಂಡಿದ್ದು 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಮಾಸ್ ಹಾಗೂ ಇತರ ಸಶಸ್ತ್ರ ಹೋರಾಟಗಾರರ ಗುಂಪಿನ ನಡುವೆ ಶಾಲೆಯಲ್ಲಿ ನಡೆಯುತ್ತಿದ್ದ ಸಭೆಯನ್ನು ಗುರಿಯಾಗಿಸಿ ದಾಳಿ ನಡೆಸಿರುವುದಾಗಿ ಇಸ್ರೇಲ್ ಮಿಲಿಟರಿ ಹೇಳಿದೆ. ಈ ಮಧ್ಯೆ, ತಕ್ಷಣ ಸ್ಥಳಾಂತರಗೊಳ್ಳುವಂತೆ ಪೂರ್ವ ಲೆಬನಾನ್ನ ಬೆಕಾ ಪ್ರದೇಶದ ನಿವಾಸಿಗಳಿಗೆ ಇಸ್ರೇಲ್ ಸೇನೆ ಎಚ್ಚರಿಕೆ ನೀಡಿರುವುದಾಗಿ ವರದಿಯಾಗಿದೆ.