HEALTH TIPS

ಮುಂಬೈಯಲ್ಲಿ 30 ದಿನಗಳವರೆಗೆ ಪ್ಯಾರಾಗ್ಲೈಡರ್‌, ಡ್ರೋನ್‌ ಹಾರಾಟ ನಿಷೇಧ

            ಮುಂಬೈ: ನಗರದಲ್ಲಿ ಡ್ರೋನ್‌ಗಳು, ರಿಮೋಟ್ ಕಂಟ್ರೋಲ್ ಮೈಕ್ರೋಲೈಟ್ ಏರ್‌ಕ್ರಾಫ್ಟ್‌ಗಳು, ಪ್ಯಾರಾಗ್ಲೈಡರ್‌ಗಳು ಮತ್ತು ಹಾಟ್ ಏರ್ ಬಲೂನ್‌ಗಳ ಹಾರಾಟವನ್ನು 30 ದಿನಗಳವರೆಗೆ ಮುಂಬೈ ಪೊಲೀಸರು ನಿಷೇಧಿಸಿದ್ದಾರೆ.

         ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ.

            ಈ ಆದೇಶ ಅಕ್ಟೋಬರ್ 31ರಿಂದ ನವೆಂಬರ್ 29ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

          'ಉಗ್ರರು ಮತ್ತು ಸಮಾಜವಿರೋಧಿ ಶಕ್ತಿಗಳು ವಿವಿಐಪಿಗಳನ್ನು ಗುರಿಯಾಗಿಸಲು, ಪ್ರಾಣಕ್ಕೆ ಅಪಾಯವನ್ನುಂಟುಮಾಡಲು ಮತ್ತು ಸಾರ್ವಜನಿಕ ಆಸ್ತಿಯನ್ನು ನಾಶಮಾಡಲು ಡ್ರೋನ್‌ಗಳು, ಮೈಕ್ರೋಲೈಟ್ ಏರ್‌ಕ್ರಾಫ್ಟ್ ಹಾಗೂ ಪ್ಯಾರಾಗ್ಲೈಡರ್‌ಗಳನ್ನು ಬಳಸುವ ಸಾಧ್ಯತೆ ಇದೆ. ಇಂತಹ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಸಲುವಾಗಿ ನಿರ್ಬಂಧಗಳನ್ನು ಹೇರಲಾಗಿದೆ' ಎಂದು ಅವರು ಹೇಳಿದ್ದಾರೆ.

            ನಿರ್ಬಂಧಗಳನ್ನು ಉಲ್ಲಂಘಿಸಿದವರಿಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223ರ ಅಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್‌ 20ರಂದು ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. 23ರಂದು ಫಲಿತಾಂಶ ಹೊರಬೀಳಲಿದೆ. ಜತೆಗೆ, ನವೆಂಬರ್ 26ರಂದು (26‌‌/11) ಮುಂಬೈಯಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಗೆ 16 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಮುಂಬೈನಗರ ಬಿಗಿ ಪೊಲೀಸ್ ಭದ್ರತೆಗೆ ಸಾಕ್ಷಿಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries