HEALTH TIPS

ಪಾಕಿಸ್ತಾನ | ಮತ್ತೆರಡು ಪೋಲಿಯೊ ಪ್ರಕರಣ ಪತ್ತೆ: ಒಟ್ಟು ಸಂಖ್ಯೆ 41ಕ್ಕೆ ಏರಿಕೆ

          ಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಎರಡು ಹೊಸ ಪೋಲಿಯೊ ಪ್ರಕರಣಗಳು ದೃಢಪಟ್ಟಿವೆ. ಸೋಂಕು ನಿರ್ಮೂಲನೆಗೆ ಪಾಕಿಸ್ತಾನ ಸರ್ಕಾರ ನಡೆಸುತ್ತಿರುವ ಪ್ರಯತ್ನಕ್ಕೆ ಇದರಿಂದ ಹಿನ್ನಡೆ ಉಂಟಾದಂತಾಗಿದೆ.

          ಬಲೂಚಿಸ್ತಾನ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳಲ್ಲಿ ಈ ಪ್ರಕರಣಗಳು ವರದಿಯಾಗಿದ್ದು, ಈ ವರ್ಷ ಒಟ್ಟು ಪ್ರಕರಣಗಳ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಈ ಬಗ್ಗೆ 'ಡಾನ್' ಪತ್ರಿಕೆ ವರದಿ ಮಾಡಿದೆ.

          ಬಲೂಚಿಸ್ತಾನದ ಲೋರಲೈ ಜಿಲ್ಲೆಯಲ್ಲಿ ಮೂರೂವರೆ ವರ್ಷದ ಬಾಲಕಿಗೆ ಪೋಲಿಯೊ ದೃಢಪಟ್ಟಿದೆ. ಜಿಲ್ಲೆಯಲ್ಲಿ ಈ ವರ್ಷ ವರದಿಯಾದ ಮೊದಲ ಪ್ರಕರಣ ಇದಾಗಿದೆ. ಪೋಲಿಯೊ ಲಸಿಕೆ ಅಭಿಯಾನದ ಅವಧಿಯಲ್ಲಿ ಈ ಮಗು ಲಸಿಕೆ ಪಡೆದುಕೊಂಡಿರಲಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

            ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡೂವರೆ ವರ್ಷದ ಮಗುವಿನಲ್ಲಿ ಮತ್ತೊಂದು ಪ್ರಕರಣ ದೃಢಪಟ್ಟಿದೆ.

             ಈ ವರ್ಷ ಇಲ್ಲಿಯವರೆಗೆ, ಬಲೂಚಿಸ್ತಾನದಲ್ಲಿ 21, ಸಿಂಧ್‌ನಲ್ಲಿ - 12, ಖೈಬರ್ ಪಖ್ತುಂಖ್ವಾದಲ್ಲಿ- 6, ಪಂಜಾಬ್ ಮತ್ತು ಇಸ್ಲಾಮಾಬಾದ್‌ನಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ.

           ದೇಶದಲ್ಲಿ ಪೋಲಿಯೊ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಮುಂದಿನ ವಾರ ರಾಷ್ಟ್ರವ್ಯಾಪಿ ಪೋಲಿಯೊ ಲಸಿಕಾ ಅಭಿಯಾನ ಹಮ್ಮಿಕೊಳ್ಳಲು ಪಾಕಿಸ್ತಾನ ಸರ್ಕಾರ ಯೋಜಿಸಿದೆ. ಈ ಕಾರ್ಯಕ್ರಮದಲ್ಲಿ 45 ದಶಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries