HEALTH TIPS

ಅಸ್ಸಾಂನಲ್ಲಿ 4.2 ತೀವ್ರತೆಯ ಭೂಕಂಪ: ಯಾವುದೇ ಹಾನಿ ಇಲ್ಲ

 ಗುವಾಹಟಿ: ಅಸ್ಸಾಂ ರಾಜ್ಯದ ಉತ್ತರ ಹಾಗೂ ಮಧ್ಯ ಭಾಗದಲ್ಲಿ ಭಾನುವಾರ ಬೆಳಗ್ಗೆ 7.45ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿದೆ.

ರಾಜಧಾನಿ ಗುವಾಹಟಿಯಿಂದ ಉತ್ತರಕ್ಕೆ ಸುಮಾರು 105 ಕಿ.ಮೀ ದೂರದಲ್ಲಿ ಅಸ್ಸಾಂ-ಅರುಣಾಚಲ ಪ್ರದೇಶ ಗಡಿಯ ಸಮೀಪದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ.


ಇದು ಭೂಮಿಯ 15 ಕಿ.ಮೀ. ಆಳದಲ್ಲಿ ಕೇಂದ್ರಿಕೃತವಾಗಿತ್ತು ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ತಿಳಿಸಿದೆ.

ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ದರಾಂಗ್, ತಮುಲ್‌ಪುರ, ಸೋನಿತ್‌ಪುರ, ಮತ್ತು ಬಿಸ್ವನಾಥ ಜಿಲ್ಲೆಗಳಲ್ಲೂ ಕಂಪನದ ಅನುಭವವಾಗಿದೆ. ಬ್ರಹ್ಮಪುತ್ರ ನದಿ ತೀರದಲ್ಲಿರುವ ಕಾಮರೂಪ, ಮೊರಿಗಾಂವ್ ಮತ್ತು ನಾಗಾಂವ್ ಜಿಲ್ಲೆಗಳಲ್ಲೂ ಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರುಣಾಚಲದ ಪಶ್ಚಿಮ ಭಾಗ ಮತ್ತು ಭೂತಾನ್‌ ದೇಶದ ಪೂರ್ವ ಭಾಗದ ಕೆಲವು ಪ್ರದೇಶಗಳಲ್ಲಿ ಸಹ ಭೂಕಂಪವಾಗಿದೆ ಎಂದು ವರದಿಗಳು ತಿಳಿಸಿವೆ.

ಭಾರತದ ಈಶಾನ್ಯ ಪ್ರದೇಶವು ಅಧಿಕ ಭೂಕಂಪ ವಲಯದಲ್ಲಿರುವುದರಿಂದ ಇಲ್ಲಿ ಪದೇ ಪದೇ ಭೂಕಂಪ ಸಂಭವಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries