ಕೋಲ್ಕತ್ತ: ಡಾನಾ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಮತ್ತಿಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಕೋಲ್ಕತ್ತ: ಡಾನಾ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಮತ್ತಿಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಪೂರ್ವ ವರ್ಧಮಾನ ಜಿಲ್ಲೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ವಯಂಸೇವಕ ಚಂದನ್ ದಾಸ್ (31) ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಶುಕ್ರವಾರ ವಿದ್ಯುತ್ ಸ್ಪರ್ಶಿಸಿ ಇಬ್ಬರು ಮೃತಪಟ್ಟಿದ್ದರು.
ಡಾನಾ ಚಂಡಮಾರುತವು ಒಡಿಶಾದ ಧಾಮರ ಮತ್ತು ಭಿತರ್‌ಕನಿಕಾ ಪ್ರದೇಶಗಳ ನಡುವೆ ಭೂಮಿಗೆ ಅಪ್ಪಳಿಸಿದೆ. ಇದು ಭೂಮಿಗೆ ಅಪ್ಪಳಿಸುವ ಪ್ರಕ್ರಿಯೆಯು ಶುಕ್ರವಾರ ಮಧ್ಯರಾತ್ರಿ 12.05ಕ್ಕೆ ಆರಂಭವಾಗಿತ್ತು. ಎಂಟೂವರೆ ತಾಸುಗಳ ನಂತರ ಶುಕ್ರವಾರ ಬೆಳಿಗ್ಗೆ 8.30ಕ್ಕೆ ಅದು ಪೂರ್ಣಗೊಂಡಿತು. ಗಂಟೆಗೆ 110 ಕಿ.ಮೀ ವೇಗದಲ್ಲಿ ಅಪ್ಪಳಿಸಿದ್ದ ಡಾನಾ ಸದ್ಯ ದುರ್ಬಲಗೊಳ್ಳುತ್ತಿದೆ ಎಂದು ಐಎಂಡಿ ತಿಳಿಸಿದೆ.
ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಹಾಗೂ ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ. ಒಡಿಶಾದಲ್ಲಿ ಸುಮಾರು 2 ಲಕ್ಷದ 80 ಸಾವಿರ ಎಕರೆ ಪ್ರದೇಶ ಜಲಾವೃತಗೊಂಡಿದೆ. 1 ಲಕ್ಷದ 75 ಸಾವಿರ ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.