ನವದೆಹಲಿ: ಜೈಷ್-ಎ- ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ದೇಶದ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಶನಿವಾರ ಶೋಧ ಕಾರ್ಯಾಚರಣೆ ನಡೆಸಿದೆ.
ನವದೆಹಲಿ: ಜೈಷ್-ಎ- ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ದೇಶದ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಶನಿವಾರ ಶೋಧ ಕಾರ್ಯಾಚರಣೆ ನಡೆಸಿದೆ.
ಬೆಳಗ್ಗೆ 6 ಗಂಟೆಗೆ ಏಕಕಾಲದಲ್ಲಿ 22 ಸ್ಥಳಗಳಲ್ಲಿ ಶೋಧ ಕಾರ್ಯ ಮಾಡಲಾಗುತ್ತಿದೆ.
ಮಹಾರಾಷ್ಟ್ರ, ದೆಹಲಿ, ಅಸ್ಸಾಂ, ಉತ್ತರಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿನ 22 ಪ್ರದೇಶಗಳಲ್ಲಿ ದಾಳಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಹೈಬ್ರಿಡ್ ಭಯೋತ್ಪಾದಕರು, ಉಗ್ರರ ಬಗ್ಗೆ ಸಹಾನುಭೂತಿ ಹೊಂದಿರುವವರು, ಅವರಿಗೆ ಆಶ್ರಯ ನೀಡಿ ಸಹಾಯ ಮಾಡುವವರು ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಅಂಗಸಂಸ್ಥೆಗಳ ಜತೆ ಸಂಬಂಧ ಹೊಂದಿರುವವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ಮಾಡಲಾಗುತ್ತಿದೆ.
ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟಗಳಾದ ಲಷ್ಕರ್-ಎ-ತಯಬಾ (ಎಲ್‌ಇಟಿ), ಜೈಷ್-ಎ- ಮೊಹಮ್ಮದ್ (ಜೆಇಎಂ), ಹಿಜ್ಬುಲ್-ಮುಜಾಹಿದ್ದೀನ್ (ಎಚ್‌ಎಂ), ಅಲ್-ಬದ್ರ್, ಅಲ್ ಕೈದಾ ಉಗ್ರ ಸಂಘಟನೆಗಳ ಮೇಲೆ ನಿಗಾವಹಿಸಲಾಗಿದೆ.
ಈ ಸಂಘಟನೆಗಳು ನಡೆಸುತ್ತಿರುವ ಭಯೋತ್ಪಾದಕ ಜಾಲವನ್ನು ನಿರ್ಮೂಲನೆಗೊಳಿಸುವ ಉದ್ದೇಶದಿಂದ 2022ರ ಜೂನ್ 21ರಂದು ಎನ್‌ಐಎ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು. ಅಲ್ಲದೆ ತನಿಖೆಯ ಭಾಗವಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.