ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣಾ ತಕರಾರು ಅರ್ಜಿಯ ಮೇಲಿನ ವಾದ-ಪ್ರತಿವಾದ ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ಪೂರ್ಣಗೊಂಡಿದ್ದು, ತೀರ್ಪು ಘೋಷಣೆಯನ್ನು ಅ. 5ಕ್ಕೆ ಮುಂದೂಡಲಾಗಿದೆ.
ಮಂಜೇಶ್ವರ ವಿಧಾನಸಭೆಗೆ 2021ರಲ್ಲಿ ನಡೆದ ಚುನಾವಣೆಯಲ್ಲಿ ಬಿಎಸ್ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ. ಸುಂದರ ಅವರಿಗೆ 2.5ಲಕ್ಷ ರೂ ನಗದು ಹಾಗೂ ಮೊಬೈಲ್ ಫೋನ್ ನೀಡಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಿರುವುದಾಗಿ ಆರೋಪಿಸಿ ವಿಧಾನಸಭಾ ಕ್ಷೇತ್ರದಲ್ಲಿ ಎಡರಂಗದಿಂದ ಸ್ಪರ್ಧಿಸಿದ್ದ ವಿ.ವಿ ರಮೇಶನ್ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ, ಪಕ್ಷದ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್, ಬಿಜೆಪಿ ಮುಂಡರಾದ ವಿ. ಬಾಲಕೃಷ್ಣ ಶೆಟ್ಟಿ, ಸುನಿಲ್ ನಾಯ್ಕ್, ಮಣಿಕಂಠ ರೈ, ವೈ. ಸುರೇಶ್ ಹಾಗೂ ಲೋಕೇಶ್ ನೋಂಡ ಒಳಗೊಂಡಂತೆ ಅರು ಮಂದಿ ವಿರುದ್ಧ ಬದಿಯಡ್ಕ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ನಂತರ ಪ್ರಕರಣವನ್ನು ಜಿಲ್ಲಾ ಕ್ರೈಂ ಬ್ರಾಂಚ್‍ಗೆ ಹಸ್ತಂತರಿಸಲಾಗಿತ್ತು. ತಮ್ಮ ವಿರುದ್ಧ ಪೊಲೀಸರು ದಾಖಲಿಸಿಕೊಮಡಿರುವ ಪ್ರಕರಣ ವಾಸ್ತವ ವಿರುದ್ಧವಾಗಿದ್ದು, ಕಾನೂನು ಪ್ರಕಾರ ಇದು ನೆಲೆನಿಲ್ಲದು ಂದೂ, ಪ್ರಕರಣವನ್ನು ರದ್ದುಪಡಿಸುವಂತೆಯೂ ಕೋರಿ ಆರೋಪಿಗಳಲ್ಲಿ ಒಬ್ಬರಾದ ಕೆ.ಸುರೇಂದ್ರನ್ ಸೇರಿದಂತೆ ಇತರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.