ನವದೆಹಲಿ: 'ದೇಶದಲ್ಲಿ ಮುಂದಿನ ಐದು ವರ್ಷದಲ್ಲಿ ಹೊಸದಾಗಿ 50ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು' ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್‌ಮೋಹನ್ ನಾಯ್ಡು ತಿಳಿಸಿದ್ದಾರೆ.
ನವದೆಹಲಿ: 'ದೇಶದಲ್ಲಿ ಮುಂದಿನ ಐದು ವರ್ಷದಲ್ಲಿ ಹೊಸದಾಗಿ 50ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು' ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್‌ಮೋಹನ್ ನಾಯ್ಡು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ದೇಶೀಯ ವಿಮಾನಯಾನ ವ್ಯವಸ್ಥೆಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.
ಮುಂದಿನ 20 ವರ್ಷದಲ್ಲಿ 200ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದರು.
ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ವುಮ್ಲುನ್ಮಾಂಗ್ ವುಲ್ನಮ್ ಮಾತನಾಡಿ, 'ಪ್ರಸ್ತುತ ದೇಶದಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ 22 ಕೋಟಿ ಇದೆ. ಮುಂದಿನ ಐದು ವರ್ಷದಲ್ಲಿ ಇದು ದ್ವಿಗುಣಗೊಳ್ಳಲಿದೆ' ಎಂದು ವಿವರಿಸಿದರು.
ಕಳೆದ ಹತ್ತು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣಗಳ ಸಂಖ್ಯೆ ದ್ವಿಗುಣಗೊಂಡಿದೆ. ದೇಶದಲ್ಲಿ ಒಟ್ಟು 157 ವಿಮಾನ ನಿಲ್ದಾಣಗಳಿವೆ.