ತಿರುವನಂತಪುರಂ: ರಾಜ್ಯದಲ್ಲಿ ಭಾರೀ ಮಳೆ ಮುಂದುವರಿದಿದ್ದು, ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಳಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾರೀ ಮಳೆಯಾಗುವ ಎಚ್ಚರಿಕೆ ಇದೆ. ಭೂಕುಸಿತ ಮತ್ತು ಪ್ರವಾಹ ಸಂಭವಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ 40 ಕಿಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಪತ್ತನಂತಿಟ್ಟ, ಆಲಪ್ಪುಳ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್‍ನಲ್ಲಿರುವ ಜಿಲ್ಲೆಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳು ಮತ್ತು ನದಿ ದಡಗಳಲ್ಲಿ ಜಲಾವೃತವಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತೀವ್ರ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಗಂಟೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಮುಂದಿನ ಕೆಲವು ದಿನಗಳ ಕಾಲ ಕೇರಳದಲ್ಲಿ ಮಳೆ ಮುಂದುವರಿಯಲಿದೆ ಎಂದು ಶನಿವಾರ ಮತ್ತು ಭಾನುವಾರ ಮಧ್ಯ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ನಿರೀಕ್ಷಿಸಲಾಗಿದೆ. ಕೇರಳ ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ ನೀಡಿಲ್ಲ.