ಬದಿಯಡ್ಕ: ಮಾನ್ಯ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ ಅಕ್ಟೋಬರ್ 6ರಂದು ಭಾನುವಾರ ನಡೆಯಲಿದೆ. ಪುರಾತನ ಇತಿಹಾಸವನ್ನು ಹೊಂದಿರುವ ಶ್ರೀಕ್ಷೇತ್ರದ ಜೀರ್ಣೋದ್ಧಾರ ಕಾರ್ಯವು ಪ್ರಗತಿಯಲ್ಲಿದ್ದು ಮಾರ್ಚ್ ಮೊದಲ ವಾರದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ. ಈಗಾಗಲೇ ಶಿಲಾಮಯ ಗರ್ಭಗುಡಿ, ನಮಸ್ಕಾರ ಮಂಟಪದ ಕಾರ್ಯ ನಡೆದಿದ್ದು, ಸುತ್ತುಗೋಪುರ, ಪಾಕಶಾಲೆ, ರಾಜಗೋಪುರ ಕೆಲಸಗಳು ಪ್ರಗತಿಯಲ್ಲಿದೆ.
ಸಭಾ ಕಾರ್ಯಕ್ರಮ :
ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಎಡನೀರು ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿರುವರು. ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳು ಗೌರವ ಉಪಸ್ಥಿತರಿರುವರು. ಧಾರ್ಮಿಕ ಮುಂದಾಳು ಬಿ.ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸಲಿರುವರು. ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಅಧ್ಯಕ್ಷ ಕೆ.ಕೆ.ಶೆಟ್ಟಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಗೋಪಾಲಕೃಷ್ಣ ಪೈ ಬದಿಯಡ್ಕ, ಗಂಗಾಧರ ನಾಯರ್ ಪಾಡಿ, ಮಧುಸೂದನ ಆಯರ್ ಮಂಗಳೂರು, ಮಲಬಾರ್ ದೇವಸ್ವಮ್ ಬೋರ್ಡ್ ಎಸಿ ಮೆಂಬರ್ ಶಂಕರ ರೈ ಮಾಸ್ತರ್, ಡಾ ನರೇಶ್ ರೈ ದೆಪ್ಪುಣಿಗುತ್ತು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
: ನೂತನವಾಗಿ ನಿರ್ಮಾಣಗೊಂಡ ಶಿಲಾಮಯ ಗರ್ಭಗುಡಿ ಹಾಗೂ ನಮಸ್ಕಾರ ಮಂಟಪ