HEALTH TIPS

ಆಯುಷ್ಮಾನ್‌ ಭಾರತ: 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆಗೆ ಮಂಗಳವಾರ ಚಾಲನೆ?

          ವದೆಹಲಿ: 70 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಆಯುಷ್ಮಾನ್‌ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಅಡಿಯಲ್ಲಿ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್‌ 29ರಂದು ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

         ಪುನರಾವರ್ತಿತ ಲಸಿಕೆಗಳ ಎಲೆಕ್ಟ್ರಾನಿಕ್‌ ನೋಂದಣಿ ಉದ್ದೇಶದಿಂದ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಯು-ವಿನ್‌ ಪೋರ್ಟಲ್‌ ಯೋಜನೆ ಸೇರಿದಂತೆ ಹಲವು ಯೋಜನೆಗಳಿಗೂ ಪ್ರಧಾನಿ ಚಾಲನೆ ನೀಡಲಿದ್ದಾರೆ. ಗರ್ಭಿಣಿ ಮತ್ತು ಮಕ್ಕಳಿಗೆ ನೀಡಲಾಗುವ ಲಸಿಕೆಗಳ ಶಾಶ್ವತ ನೋಂದಣಿಗಾಗಿ ಯು-ವಿನ್‌ ವೇದಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ.

          ಆದಾಯ ಸ್ಥಿತಿಗತಿಯನ್ನು ಹೊರತುಪಡಿಸಿ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಆಯುಷ್ಮಾನ್‌ ಭಾರತ ಯೋಜನೆಯಡಿ ವಿಮೆ ಸೌಲಭ್ಯ ಒದಗಿಸುವುದರಿಂದ ಅಂದಾಜು 6 ಕೋಟಿ ಜನರಿಗೆ, ಸರಿಸುಮಾರು 4.5 ಕೋಟಿ ಕುಟುಂಬಗಳಿಗೆ ನೆರವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಬಡವರು, ಶ್ರೀಮಂತರು ಎನ್ನದೆ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ. ಇವರು ವಾರ್ಷಿಕ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

             ಪ್ರಸಕ್ತ ವರ್ಷ ಸೆಪ್ಟೆಂಬರ್‌ 1ರವರೆಗೆ 12,696 ಖಾಸಗಿ ಆಸ್ಪತ್ರೆಗಳು ಸೇರಿದಂತೆ 29,648 ಆಸ್ಪತ್ರೆಗಳು ಎಬಿ-ಪಿಎಂಜೆಎವೈ ಯೋಜನೆಗೆ ಒಳಪಟ್ಟಿವೆ. ದೇಶದ 33 ರಾಜ್ಯಗಳಲ್ಲಿ ಯೋಜನೆಯು ಅನುಷ್ಠಾನಗೊಂಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries