HEALTH TIPS

ನೀರ್ಚಾಲಿನಲ್ಲಿ ಅಕ್ಟೋಬರ್ 7 ರಿಂದ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಒಲಿಂಪಿಕ್ಸ್

Top Post Ad

Click to join Samarasasudhi Official Whatsapp Group

Qries

Qries

ಬದಿಯಡ್ಕ: ಕುಂಬಳೆ ಉಪಜಿಲ್ಲಾ ಮಟ್ಟದ ಕೇರಳ ಶಾಲಾ ಒಲಿಂಪಿಕ್ಸ್ ಈ ಬಾರಿ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 7 ರಿಂದ 10 ರ ತನಕ ಶಾಲಾ ಮಕ್ಕಳ ವಿವಿಧ ಕ್ರೀಡಾ ಸ್ಪರ್ಧೆಗಳು ಶಾಲೆಯ ನೀರ್ಚಾಲು ಮತ್ತು ಮಲ್ಲಡ್ಕದ ಮೈದಾನದಲ್ಲಿ ಜರಗಲಿದೆ. ಅಕ್ಟೋಬರ್ 7 ರಂದು ಬೆಳಗ್ಗೆ ಶಾಲಾ ವ್ಯವಸ್ಥಾಪಕರಾದ ಜಯದೇವ ಖಂಡಿಗೆಯವರು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅಕ್ಟೋಬರ್ 8 ರಂದು ಬೆಳಗ್ಗೆ ಕಾಸರಗೋಡು ವಿಧಾನ ಸಭಾ ಕ್ಷೇತ್ರದ ಶಾಸಕ ಎನ್.ಎ.ನೆಲ್ಲಿಕುನ್ನು ಅವರ ಅಧ್ಯಕ್ಷತೆಯಲ್ಲಿ ಜರಗುವ ಉದ್ಘಾಟನಾ ಸಮಾರಂಭದಲ್ಲಿ ಕಾಸರಗೋಡು ಲೋಕಸಭಾ ಕ್ಷೇತ್ರದ ಸಂಸದ ರಾಜಮೋಹನ್ ಉಣ್ಣಿತ್ತಾನ್ ಕ್ರೀಡಾ ಸ್ಪರ್ಧೆಗಳನ್ನು ಉದ್ಘಾಟಿಸಲಿದ್ದಾರೆ.



Below Post Ad


ಜಾಹಿರಾತು














ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries