HEALTH TIPS

ಅಸ್ಸಾಂ | ಸರ್ಕಾರಿ ನೇಮಕಾತಿ ಪರೀಕ್ಷೆ; ರಾಜ್ಯದಲ್ಲಿ 8 ತಾಸು ಇಂಟರ್‌ನೆಟ್ ಸ್ಥಗಿತ

         ಗುವಾಹಟಿ: ಸರ್ಕಾರಿ ನೇಮಕಾತಿ ಪರೀಕ್ಷೆ ನಡೆಯಲಿರುವ ಕಾರಣ ಅಸ್ಸಾಂನಾದ್ಯಂತ ಭಾನುವಾರ ಬೆಳಿಗ್ಗೆ 8.30ರಿಂದ ಸಂಜೆ 4ಗಂಟೆಯವರೆಗೆ ಮೊಬೈಲ್‌ ಇಂಟರ್‌ನೆಟ್‌ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

       ಪಾರದರ್ಶಕ ಮತ್ತು ನ್ಯಾಯಯುತವಾಗಿ ಲಿಖಿತ ಪರೀಕ್ಷೆ ನಡೆಸಲು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಸಾರ್ವಜನಿಕ ಸುರಕ್ಷತೆಗೆ ತೊಡಕಾಗದಂತೆ ತಡೆಯಲು ಮೊಬೈಲ್‌ ಇಂಟರ್‌ನೆಟ್‌, ಮೊಬೈಲ್‌ ವೈಫೈ ಸೇರಿದಂತೆ ಮೊಬೈಲ್‌ ಡಾಟಾ ಸೇವೆಗಳನ್ನು ಒದಗಿಸುವವರು ಸ್ಥಗಿತಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

           ಸಪ್ಟೆಂಬರ್‌ನಲ್ಲಿ ಇದೇ ರೀತಿಯ ಪರೀಕ್ಷೆ ನಡೆಸುವ ವೇಳೆ ಎರಡು ದಿನಗಳ ಕಾಲ ಮೊಬೈಲ್ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

          ಭಾನುವಾರ ಅಸ್ಸಾಂ ರಾಜ್ಯ ಶಾಲ ಶಿಕ್ಷಣ ಇಲಾಖೆಯು ಗ್ರೇಡ್‌ 4ರ ಹುದ್ದೆಗಾಗಿ 28 ಜಿಲ್ಲೆಗಳಲ್ಲಿ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಸುತ್ತಿದೆ. 8,27,130 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಬೆಳಿಗ್ಗೆ 9 ರಿಂದ 11.30ರವರೆಗೆ ಹಾಗೂ ಮಧ್ಯಾಹ್ನ 1.30ರಿಂದ 4ರವರೆಗೆ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

           ಮೊಬೈಲ್ ಆಯಪ್‌ಗಳ ಮೂಲಕ ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ತಡೆಯಲು ಮತ್ತು ಸಾರ್ವಜನಿಕರಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಇರುವ ಅಪನಂಬಿಕೆಯನ್ನು ಹೋಗಲಾಡಿಸಲು ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries