HEALTH TIPS

9 ವರ್ಷಗಳಲ್ಲಿ ಇದೇ ಮೊದಲು; ಪಾಕಿಸ್ತಾನಕ್ಕೆ S Jaishankar ಭೇಟಿ; ಅಚ್ಚರಿ ನಡೆ ಹಿಂದೆ ಮಹತ್ವದ ಕಾರಣ!

     ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹಳಸಿರುವಂತೆಯೇ ಅಚ್ಚರಿ ನಡೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆ.

      9 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು ಪ್ರಯಾಣಿಸುತ್ತಿದ್ದು, ಭಾರತದ ಈ ಅಚ್ಚರಿ ನಡೆಯ ಹಿಂದೆ ಮಹತ್ವದ ಕಾರಣವೊಂದು ಅಡಗಿದೆ ಎನ್ನಲಾಗಿದೆ.

    ಮೂಲಗಳ ಪ್ರಕಾರ ಇದೇ ಅಕ್ಟೋಬರ್ 15 ಮತ್ತು 16 ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ ಗೆ ಜೈ ಶಂಕರ್ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ಇಸ್ಲಾಮಾಬಾದ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌ ಜೈ ಶಂಕರ್ ಭಾಗಿಯಾಗಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ.

     ಭಾರತ, ಚೀನಾ, ರಷ್ಯಾ, ಪಾಕಿಸ್ತಾನ, ಕಝಾಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ಒಳಗೊಂಡಿರುವ SCO, ಪ್ರಭಾವಿ ಆರ್ಥಿಕ ಮತ್ತು ಭದ್ರತಾ ಸಂಸ್ಥೆಯಾಗಿದ್ದು, ಇದು ಅತಿದೊಡ್ಡ ಟ್ರಾನ್ಸ್-ಪ್ರಾದೇಶಿಕ ಅಂತರಾಷ್ಟ್ರೀಯ ಸಂಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಈ ಪ್ರಮುಖ ಪ್ರಾದೇಶಿಕ ಗುಂಪಿನ ಭಾಗವಾಗಿ, ಪಾಕಿಸ್ತಾನ ಮತ್ತು ಭಾರತ ಎರಡೂ ಶೃಂಗಸಭೆ ಸಭೆಗಳನ್ನು ನಡೆಸಬಹುದು. ಭಾರತ ಕಳೆದ ವರ್ಷ SCO ಶೃಂಗಸಭೆಯನ್ನು ಆಯೋಜಿಸಿತ್ತು, ಈ ಶೃಂಗಸಭೆಯನ್ನು ವರ್ಚುವಲ್ ಮೋಡ್‌ನಲ್ಲಿ ಆಯೋಜಿಸಲಾಗಿತ್ತು. ಇದರಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ವೀಡಿಯೊ ಲಿಂಕ್ ಮೂಲಕ ಭಾಗವಹಿಸಿದ್ದರು.

     ಪಾಕಿಸ್ತಾನವು ಶಾಂಘೈ ಸಹಕಾರ ಸಂಸ್ಥೆ (SCO) ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ (CHG) ನ ರೊಟೇಟೆಡ್ ಅಧ್ಯಕ್ಷರನ್ನು ಹೊಂದಿದೆ. ಹೀಗಾಗಿ, ಅಕ್ಟೋಬರ್‌ನಲ್ಲಿ ಎರಡು ದಿನಗಳ SCO ಸರ್ಕಾರದ ಮುಖ್ಯಸ್ಥರ ಸಭೆಯನ್ನು ಪಾಕಿಸ್ತಾನ ಆಯೋಜಿಸಲಿದೆ. ಇಸ್ಲಾಮಾಬಾದ್ ಶೃಂಗಸಭೆಯು ಸಚಿವರ ಸಭೆ ಮತ್ತು SCO ಸದಸ್ಯ ರಾಷ್ಟ್ರಗಳ ನಡುವೆ ಹಣಕಾಸು, ಆರ್ಥಿಕ, ಸಾಮಾಜಿಕ-ಸಾಂಸ್ಕೃತಿಕ ಮತ್ತು ಮಾನವೀಯ ಸಹಕಾರದ ಮೇಲೆ ಕೇಂದ್ರೀಕರಿಸಿ ಹಲವಾರು ಸುತ್ತಿನ ಹಿರಿಯ ಅಧಿಕಾರಿಗಳ ಸಭೆಗಳು ನಡೆಯಲಿದೆ ಎನ್ನಲಾಗಿದೆ.

9 ವರ್ಷಗಳಲ್ಲೇ ಇದೇ ಮೊದಲು

    ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಎಸ್‌ಸಿಒ ಶೃಂಗಸಭೆಗೆ ಆಹ್ವಾನಿಸಿತ್ತು. ಆದರೆ ಡಿಸೆಂಬರ್ 2015 ರಿಂದ ಯಾವುದೇ ಭಾರತೀಯ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಭೇಟಿ ನೀಡಿಲ್ಲ. ದಿವಂಗತ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 2015 ರಲ್ಲಿ ಅಫ್ಘಾನಿಸ್ತಾನದ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲು ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದರು.

    ಆದರೆ ಇದೀಗ ಬರೋಬ್ಬರಿ ಬರೋಬ್ಬರಿ 9 ವರ್ಷಗಳ ನಂತರ ಭಾರತದ ಸಚಿವರೊಬ್ಬರು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 15 ಮತ್ತು 16 ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆ ನಡೆಯಲಿದ್ದು, ಈ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವರು ಪಾಲ್ಗೊಳ್ಳಲಿರುವುದರಿಂದ ಈ ಭೇಟಿಯು ಭಾರೀ ಮಹತ್ವ ಪಡೆದುಕೊಂಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries