ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಆತ್ಮಾಹುತಿ ಬಾಂಬರ್‌ಗಳು ಸೇರಿದಂತೆ 9 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ಗುರುವಾರ ತಿಳಿಸಿದೆ.
ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಆತ್ಮಾಹುತಿ ಬಾಂಬರ್‌ಗಳು ಸೇರಿದಂತೆ 9 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ಗುರುವಾರ ತಿಳಿಸಿದೆ.
ಗುಪ್ತಚರ ಮಾಹಿತಿ ಮೇರೆಗೆ ಪ್ರಾಂತ್ಯದ ಬಜೌರ್ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಕಾರ್ಯಾಚರಣೆ ನಡೆಸಲಾಯಿತು ಎಂದು ಸೇನೆಯ ಮಾಧ್ಯಮ ವಿಭಾಗದ ಸಾರ್ವಜನಿಕ ಸಂಪರ್ಕದ ಆಂತರಿಕ ಸೇವೆ (ISPR) ತಿಳಿಸಿದೆ.
ಗುಂಡಿನ ಚಕಮಕಿಯಲ್ಲಿ 9 ಮಂದಿ ಭಯೋತ್ಪಾದಕರು ಹತರಾಗಿದ್ದಾರೆ. ಇವರಲ್ಲಿ ಮೋಸ್ಟ್ ವಾಂಟೆಂಡ್ ಉಗ್ರರು ಹಾಗೂ ಇಬ್ಬರು ಆತ್ಮಾಹುತಿ ಬಾಂಬರ್‌ಗಳು ಸೇರಿದ್ದಾರೆ. ಭದ್ರತಾ ಪಡೆಗಳು ಮತ್ತು ನಾಗರಿಕರ ವಿರುದ್ಧ ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ಇವರು ಸಕ್ರಿಯರಾಗಿದ್ದರು ಎಂದು ಐಎಸ್‌ಪಿಆರ್ ಪ್ರಕಟಣೆಯಲ್ಲಿ ತಿಳಿಸಿದೆ.
ಭಯೋತ್ಪಾದಕರಿಂದ ಹೆಚ್ಚಿನ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಕಾರ್ಯಾಚರಣೆ ನಡೆಯುತ್ತಿವೆ ಎಂದೂ ತಿಳಿಸಿದೆ.