ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜೆಮ್‌ಶೆಡ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜೆಮ್‌ಶೆಡ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಡಿಮೆ ರಕ್ತದೊತ್ತಡದಿಂದ ಚಂಪೈ ಸೊರೇನ್ ಅವರಿಗೆ ತಲೆ ಸುತ್ತು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಚಂಪೈ ಸೊರೇನ್ ಅವರು ಚೇತರಿಸಿಕೊಳ್ಳುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಟಾಟಾ ಆಸ್ಪತ್ರೆಯ ಜನರಲ್ ಮ್ಯಾನೇಜರ್ ಡಾ. ಸುಧೀರ್ ರೈ ಪಿಟಿಐಗೆ ತಿಳಿಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಬಂಧನ ಬಳಿಕ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಚಂಪೈ, ಹೇಮಂತ್ ಸೊರೇನ್ ಬಿಡುಗಡೆಯ ನಂತರ ಕೇವಲ ಐದೇ ತಿಂಗಳಿಗೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು.
ಜೆಎಂಎಂನಿಂದ ಅನ್ಯಾಯವಾಗಿದೆ ಎಂದು ದೂರಿದ್ದ ಚಂಪೈ ಅವರು, ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.