ಬದಿಯಡ್ಕ: ಕುಂಬಳೆ ಉಪಜಿಲ್ಲಾ ಮಟ್ಟದ ಕೇರಳ ಶಾಲಾ ಒಲಿಂಪಿಕ್ಸ್ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸೋಮವಾರ ಆರಂಭಗೊಂಡಿತು.
ಬೆಳಗ್ಗೆ 9.30 ಕ್ಕೆ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ.ಎಂ. ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಂ.ಸೂರ್ಯನಾರಾಯಣ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯ ಶಿವಪ್ರಕಾಶ್ ಎಂ.ಕೆ. ವಂದಿಸಿದರು.
2024 ಅಕ್ಟೋಬರ್ 10 ರ ತನಕ ಶಾಲಾ ಮಕ್ಕಳ ವಿವಿಧ ಕ್ರೀಡಾ ಸ್ಪರ್ಧೆಗಳು ಶಾಲೆಯ ನೀರ್ಚಾಲು ಮತ್ತು ಮಲ್ಲಡ್ಕದ ಮೈದಾನದಲ್ಲಿ ಜರಗಲಿದೆ. ಇಂದು(ಅಕ್ಟೋಬರ್ 8) ಬೆಳಗ್ಗೆ ಕಾಸರಗೋಡು ವಿಧಾನ ಸಭಾ ಕ್ಷೇತ್ರದ ಶಾಸಕ ಎನ್.ಎ.ನೆಲ್ಲಿಕುನ್ನು ಅವರ ಅಧ್ಯಕ್ಷತೆಯಲ್ಲಿ ಜರಗುವ ಉದ್ಘಾಟನಾ ಸಮಾರಂಭದಲ್ಲಿ ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ಕ್ರೀಡಾ ಸ್ಪರ್ಧೆಗಳನ್ನು ಉದ್ಘಾಟಿಸಲಿದ್ದಾರೆ.
ಅಕ್ಟೋಬರ್ 10 ಗುರುವಾದ ಅಪರಾಹ್ನ ಸಮಾರೋಪ ಸಮಾರಂಭ ಜರಗಲಿದೆ.