ಚಂಡೀಗಢ: ಗವರ್ನರ್ ಬಂಡಾರು ದತ್ತಾತ್ರೇಯ ಅವರನ್ನು ಭೇಟಿಯಾದ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಹರಿಯಾಣದಲ್ಲಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚಂಡೀಗಢ: ಗವರ್ನರ್ ಬಂಡಾರು ದತ್ತಾತ್ರೇಯ ಅವರನ್ನು ಭೇಟಿಯಾದ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಹರಿಯಾಣದಲ್ಲಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹರಿಯಾಣದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಕೆಲ ಗಂಟೆಗಳ ಬಳಿಕ ಸೈನಿ ಹಕ್ಕು ಮಂಡಿಸಿದ್ದಾರೆ.
ಹಿರಿಯ ಶಾಸಕರಾದ ಕೃಷ್ಣನ್ ಕುಮಾರ್ ಬೇಡಿ ಮತ್ತು ಅನಿಲ್ ವಿಜ್ ಅವರು ಸೈನಿ ಹೆಸರನ್ನು ಪ್ರಸ್ತಾಪಿಸಿದರು.
ಇತ್ತೀಚೆಗೆ ಮುಕ್ತಾಯಗೊಂಡ ಹರಿಯಾಣ ವಿಧಾನಸಭೆ ಚುನಾವಣೆಯ 90 ಕ್ಷೇತ್ರಗಳ ಪೈಕಿ ಬಿಜೆಪಿ 48 ಸ್ಥಾನಗಳನ್ನು ಗೆದ್ದಿತ್ತು.
ಹರಿಯಾಣ ಮುಖ್ಯಮಂತ್ರಿಯಾಗಿ ಸೈನಿ ಪ್ರಮಾಣವಚನ ಸ್ವೀಕರಿಸುತ್ತಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ.