ಕೋಲ್ಕತ್ತ: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆರು ಕಿರಿಯ ವೈದ್ಯರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂಟು ವೈದ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ ಎಂದು ಪ್ರತಿಭಟನನಿರತ ವೈದ್ಯರೊಬ್ಬರು ತಿಳಿಸಿದ್ದಾರೆ.
ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ವೈದ್ಯ ವಿದ್ಯಾರ್ಥಿನಿಯ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು ಮತ್ತು ಕೆಲಸದ ಸ್ಥಳದಲ್ಲಿ ಸೂಕ್ತ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು ಶುಕ್ರವಾರ 14 ದಿನ ಪೂರೈಸಿದೆ.