ಜೆರುಸಲೇಂ: ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹತ್ಯೆ ಮಾಡಲು ನಡೆದ ಪ್ರಯತ್ನವು, ಇರಾನ್‌ನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಮೇನಿಯನ್ನು ಹೊಡೆದುರುಳಿಸಲು ನಮಗೆ ಕಾನೂನುಸಮ್ಮತಿ ನೀಡಿದಂತಾಗಿದೆ ಎಂದು ಇಸ್ರೇಲ್ ಗುಪ್ತಚರ ಸಂಸ್ಥೆ 'ಮೊಸ್ಸಾದ್' ಹೇಳಿದೆ.

ಇಸ್ರೇಲ್ ಕರಾವಳಿಯ ಕೆಸರಿಯಾ ನಗರದಲ್ಲಿರುವ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸದ ಮೇಲೆ ಶನಿವಾರ ಡ್ರೋನ್ ದಾಳಿ ನಡೆದಿತ್ತು.
ಇಸ್ರೇಲ್‌ನ ಗುಪ್ತಚರ ಮತ್ತು ವಿಶೇಷ ಕಾರ್ಯಾಚರಣೆಗಳ ಸಂಸ್ಥೆ ಮೊಸ್ಸಾದ್ ಈ ಘಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿದೆ.
'ಪ್ರಧಾನಿ ಹತ್ಯೆಗೆ ನಡೆದಿರುವ ಯತ್ನವು ಖಮೇನಿಯನ್ನು ಹೊಡೆದು ಹಾಕಲು ಸಂಪೂರ್ಣ ಕಾನೂನುಸಮ್ಮತಿ ನೀಡಿದೆ' ಎಂದು ಟ್ವೀಟ್ ಮಾಡುವ ಮೂಲಕ ಇರಾನ್‌ಗೆ ಎಚ್ಚರಿಕೆ ನಿಡಿದೆ.
ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆ ನೆತನ್ಯಾಹು ಹತ್ಯೆಗೆ ಯತ್ನಿಸಿದೆ ಎನ್ನಲಾಗಿದೆ. ಆದರೆ, ಹಿಜ್ಬುಲ್ಲಾ ಅಥವಾ ಕಳೆದ ವರ್ಷ ಇಸ್ರೇಲ್ ಮೇಲೆ ದಾಳಿ ಮಾಡಿದ್ದ ಹಮಾಸ್ ಸಂಘಟನೆ ಈವರೆಗೆ ಹೊಣೆ ಹೊತ್ತುಕೊಂಡಿಲ್ಲ.
ದಾಳಿ ನಡೆದಿರುವುದನ್ನು ಶನಿವಾರವೇ ಖಚಿತಪಡಿಸಿರುವ ಇಸ್ರೇಲ್ ಸೇನೆ, 'ದಾಳಿ ಆದ ಹೊತ್ತಲ್ಲಿ ಪ್ರಧಾನಿ ಅಥವಾ ಅವರ ಪತ್ನಿ, ನಿವಾಸದಲ್ಲಿ ಇರಲಿಲ್ಲ. ಹಾಗಾಗಿ ಯಾರೊಬ್ಬರೂ ಗಾಯಗೊಂಡಿಲ್ಲ' ಎಂದಿದೆ.
ತಮ್ಮ ಹತ್ಯೆಗೆ ನಡೆದ ದಾಳಿಗೆ ಪ್ರತಿಕ್ರಿಯಿಸಿರುವ ನೆತನ್ಯಾಹು, 'ನನ್ನನ್ನು ಹತ್ಯೆಗೈಯಲು ಹಿಜ್ಬುಲ್ಲಾ ಸಂಘಟನೆ ನಡೆಸಿದ ಪ್ರಯತ್ನವು ಘೋರ ತಪ್ಪು' ಎಂದು ಎಚ್ಚರಿಸಿದ್ದಾರೆ.