ಪೆರ್ಲ: ಶಾಲಾ ಮಧ್ಯಾಹ್ನದೂಟಕ್ಕೆ ತರಕಾರಿ ಬೆಳೆಸುವ ಯೋಜನೆಗೆ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲಾ ವಠಾರದಲ್ಲಿ ಚಾಲನೆ ನೀಡಲಾಯಿತು. ಶಾಲಾ ಪರಿಸರ ಕ್ಲಬ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಲಾ ಗ್ರಂಥಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪೆರ್ಲ ಸೇವಾ ಸಹಕಾರಿ ಬ್ಯಾಂಕ್ ಕಾರ್ಯದರ್ಶಿ ಕೆ.ಪಿ ಪ್ರಭಾಕರ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಸದಾಶಿವ ಭಟ್ ಹರಿನಿಲಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಪುರುಷೋತ್ತಮ ಬಿ.ಎಂ ಉಪಸ್ಥಿತರಿದ್ದರು. ಶಾಲಾ ಎಸ್.ಎನ್ ನೇಚರ್ ಕ್ಲಬ್ ಸಂಚಾಲಕ ಉಮೇಶ್ ಕೆ. ಪೆರ್ಲ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಕೃಷ್ಣರಾಜ್ ವಂದಿಸಿದರು.
ಕಾರ್ಯಕ್ರಮದ ಅಂಗವಾಗಿ ಹಳೇ ಹೆಂಚುಗಳನ್ನು ಬಳಸಿ ಪರಿಸರ ಸ್ನೇಹಿ ಗ್ರೋಬ್ಯಾಗ್ ನಿರ್ಮಾಣ ಹಾಗೂ ಡಿಜಿಟಲ್ ನೀರಿನ ವ್ಯವಸ್ಥೆ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಲಾಯಿತು. ಶಾಲಾ ಶಿಕ್ಷಕರು, ಎಸ್.ಎನ್ ನೆಚರ್ ಕ್ಲಬ್ ಸದಸ್ಯ ವಿದ್ಯಾರ್ಥಿಗಳು ಸಮಾರಂಬದಲ್ಲಿ ಪಾಲ್ಗೊಂಡಿದ್ದರು.