ಮಂಜೇಶ್ವರ: ಜಿಲ್ಲಾ ವಾಲಿಬಾಲ್ ಪಂದ್ಯಾಟ ಸಮಾರೋಪ ಕೊಡ್ಲಮೊಗರು ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು.ವರ್ಕಾಡಿ ಪಂಚಾಯತಿ ಅಧ್ಯಕ್ಷೆ ಭಾರತಿ ಎಸ್ ಸಮಾರೋಪ ಉದ್ಘಾಟಿಸಿದರು. ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ ವಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಯುನಿವರ್ಸಲ್ ಗ್ರೂಫ್ ಚೆಯರ್ಮೆನ್ ಅಬ್ದುಲ್ ಲತೀಫ್ ಮುಖ್ ಅತಿಥಿಗಳಾಗಿ ಶುಭ ಹಾರೈಸಿದರು.
ಸ್ಪೋಟ್ರ್ಸ್ ಕೌನ್ಸಿಲ್ ನ ಜಿಲ್ಲಾ ಕಾರ್ಡಿನೇಟರ್ ಡಾ. ಅಶೋಕ್ ಕಾರ್ಯಕ್ರಮದ ಮಾಹಿತಿಯನ್ನು ನೀಡಿದರು.ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
.ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಮೋಹನ, ಎಂ ಪಿ ಟಿ ಅಧ್ಯಕ್ಷ ರಿಯಾನ, ಸದಸ್ಯರಾದ ಹಮೀದ್ ಕಣಿಯೂರ್ , ಉಸ್ಮಾನ್, ಹಮೀದ್, ಡಿ.ಎಸ್.ಜಿ.ಎ. ಕಾರ್ಯದರ್ಶಿ ಸಂತೋಷ್ ಕುಮಾರ್ ಉಪಸ್ಥಿತರಿದ್ದರು ಪ್ರಾಂಶುಪಾಲ ವಿಜಯ್ ಕುಮಾರ್ ಸ್ವಾಗತಿಸಿ,ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ಬಿ ವಂದಿಸಿದರು..ಸಂಧ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು.