ಕಾಸರಗೋಡು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ ಬಿಕ್ಕಟ್ಟು ಎದುರಿಸುತ್ತಿದ್ದು, ಈ ವ್ಯವಸ್ಥೆಯೊಂದಿಗೆ ಹೋಟೆಲ್ ವ್ಯಾಪಾರ ಮುನ್ನಡೆಸುವುದು ಅಸಾಧ್ಯ. ಆಹಾರ ಪದಾರ್ಥಗಳ ಬೆಲೆಯೇರಿಕೆ ಅನಿವಾರ್ಯವಾಗಲಿದೆ ಎಂಬುದಾಗಿ ಹೋಟೆಲ್ ಅಸೋಸಿಯೇಶನ್ ಕಾಸರಗೋಡು ಜಿಲ್ಲಾ ಸಮಿತಿ ತುರ್ತು ಸಭೆ ಅಭಿಪ್ರಾಯಪಟ್ಟಿದೆ.
ಹೋಟೆಲ್ ಅಸೋಸಿಯತೇಶನ್ ಸಮಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಹೋಟೆಲ್ ಅಸೋಸಿಯೇಶನ್ ರಾಜ್ಯ ಸಮಿತಿ ಕಾರ್ಯದರ್ಶಿ ಮಹಮ್ಮದ್ ಗಸಾಲಿ ಸಭೆ ಉದ್ಘಾಟಿಸಿದರು. ಜಿಲ್ಲಾ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಯಾವುದೇ ರೀತಿಯಲ್ಲಿ ಸಂಸ್ಥೆಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ.
ಪ್ರಕಾಶನ್, ರೆಫಿಕ್ ಬೈತಾನ್, ಸತ್ಯನಾಥನ್, ಅಜೇಶ್ ಮತ್ತು ರಾಜನ್ ಕಳಂಗರ ಮೊದಲಾದವರು ಉಪಸ್ಥಿತರಿದ್ದರು. ಸಂಘಟನೆ ಜಿಲ್ಲಾ ಕಾರ್ಯದರ್ಶಿ ಬಿಜು ಚುಳ್ಳಿಕ್ಕರ ಸ್ವಾಗತಿಸಿದರು. ಕೋಶಾಧಿಕಾರಿ ರಘುವೀರ ಪೈ ವಂದಿಸಿದರು.