ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ ನ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಹೃದಯ ದಿನ ಆಚರಿಸಲಾಯಿತು.
ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೃದಯವು ಶರೀರದ ಎಲ್ಲಾ ಭಾಗಗಳಿಗೆ ರಕ್ತವನ್ನು ತಲುಪಿಸಿ ನಮ್ಮ ಶರೀರದ ಎಲ್ಲಾ ಚಟುವಟಿಕೆಗಳ ನಿರ್ವಹಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಪ್ರಧಾನ ಅವಯವಗಳಲ್ಲೊಂದಾದ ಹೃದಯದ ಸಂಪೂರ್ಣ ಆರೋಗ್ಯ ನಿರ್ವಹಣೆಗೆ ಜಾಗೃತರಾಗಿರಬೇಕು ಎಂದರು.
ಪೆರ್ಲ ಕುಟುಂಬ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಪರಿವೀಕ್ಷಕ ಹರೀಶ್ ಎಂ.ಎಸ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ತುರ್ತು ಚಿಕಿತ್ಸೆಯ ಕುರಿತು ತರಗತಿ ನೀಡಿದರು. ಸ್ವಯಂ ಸೇವಕಿ ಮೇಘ ಸ್ವಾಗತಿಸಿ,. ಶ್ರೀಲಕ್ಷ್ಮಿ ವಂದಿಸಿದರು. ಝೀನಾನ ನಿರೂಪಿಸಿದರು. ಎನ್ನೆಸ್ಸೆಸ್ ಸಹಾಯಕ ಯೋಜನಾಧಿಕಾರಿ ಭವ್ಯ, ಕಾಲೇಜು ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ.ಸಂಯೋಜಿಸಿದರು.