ಸಮರಸ ಚಿತ್ರಸುದ್ದಿ: ಮಂಜೇಶ್ವರ: ವರ್ಕಾಡಿ ಕೊಡ್ಲಮೊಗರು ಶ್ರೀ ವಾಣಿ ವಿಜಯ ಪ್ರೌಡಶಾಲೆಯಲ್ಲಿ ಗಾಂಧಿ ಜಯಂತಿ ಯನ್ನುಆಚರಿಸಲಾಯಿತು. ಶಾಲಾ ರಕ್ಷಕ ಶೀಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಸಮಾರಂಭ ಉದ್ಘಾಟಿಸಿದರು. ಉಪಾಧ್ಯಕ್ಷ ಮೋಹನ್ ಮಾಸ್ಟರ್ ಅದ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಸತ್ಯಶಂಕರ್ ಅವರ ನೇತೃತ್ವದಲ್ಲಿ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಶಿಕ್ಷಕಿ ಕೃಷ್ಣವೇಣಿ ಸ್ವಾಗತಿಸಿದರು. ಪೂರ್ಣಿಮಾ ನಿರೂಪಿಸಿದರು. ಉದಯಕುಮಾರ್ ವಂದಿಸಿದರು.