ನವದೆಹಲಿ: ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಘಟನೆಗಳನ್ನು ತಡೆಯುವುದಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಾಗರಿಕ ವಿಮಾನಯಾನ ಸಚಿವಾಲಯ ಮುಂದಾಗಿದೆ.
ನವದೆಹಲಿ: ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಘಟನೆಗಳನ್ನು ತಡೆಯುವುದಕ್ಕಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಾಗರಿಕ ವಿಮಾನಯಾನ ಸಚಿವಾಲಯ ಮುಂದಾಗಿದೆ.
ಬೆದರಿಕೆ ಕರೆ ಪ್ರಕರಣದ ಅಪರಾಧಿಗಳನ್ನು 'ನೋ ಫ್ಲೈ' ಪಟ್ಟಿಗೆ ಸೇರಿಸುವುದು ಸೇರಿದಂತೆ ವಿವಿಧ ಕಠಿಣ ಕ್ರಮ ಕೈಗೊಳ್ಳುವ ಚಿಂತನೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
'ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಘಟನೆಗಳ ಕುರಿತು ಕಠಿಣ ಕ್ರಮ ಕೈಗೊಳ್ಳುವುದಕ್ಕಾಗಿ ನಿಯಮಗಳಿಗೆ ತಿದ್ದುಪಡಿ ತರುವ ಚಿಂತನೆ ಇದೆ' ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಹೇಳಿದ್ದಾರೆ.
ಕಳೆದ ನಾಲ್ಕು ದಿನಗಳಲ್ಲಿ ವಿವಿಧ ಸಂಸ್ಥೆಗಳಿಗೆ ಸೇರಿದ ಕನಿಷ್ಠ 25 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿವೆ. ಕೆಲ ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.