HEALTH TIPS

ಡಿಎಂಕೆ ಮುಖವಾಣಿ 'ಮುರಸೋಳಿ' ಪತ್ರಿಕೆ ಸಂಪಾದಕ ಮುರಸೋಳಿ ಸೆಲ್ವಂ ನಿಧನ

 ಚೆನ್ನೈತಮಿಳುನಾಡಿನ ಡಿಎಂಕೆ ಪಕ್ಷದ ಮುಖವಾಣಿ 'ಮುರಸೋಳಿ' ಪತ್ರಿಕೆಯ ನಿವೃತ್ತ ಸಂಪಾದಕ ಷಣ್ಮುಗ ಸುಂದರಂ ಸೆಲ್ವಂ (ಮುರಸೋಳಿ ಸೆಲ್ವಂ) ಅವರು ಗುರುವಾರ ಬೆಂಗಳೂರಿನಲ್ಲಿ ನಿಧನರಾದರು.


ಅವರಿಗೆ 82 ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಸೆಲ್ವಂ ಅವರು ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು. ಅವರ ಪಾರ್ಥೀವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ಚೆನ್ನೈಗೆ ತರಲಾಗಿದೆ.

ಸೆಲ್ವಂ ನಿಧನಕ್ಕೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries