ನವದೆಹಲಿ: ಭಯೋತ್ಪಾದಕ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸದಸ್ಯ ಎಂಜಿನಿಯರ್ ರಶೀದ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನು ಅವಧಿ ಇಂದಿಗೆ ಮುಕ್ತಾಯವಾಗಿದ್ದು ದೆಹಲಿಯ ತಿಹಾರ್ ಜೈಲಿಗೆ ಶರಣಾಗಿದ್ದಾರೆ.
ನವದೆಹಲಿ: ಭಯೋತ್ಪಾದಕ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸದಸ್ಯ ಎಂಜಿನಿಯರ್ ರಶೀದ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನು ಅವಧಿ ಇಂದಿಗೆ ಮುಕ್ತಾಯವಾಗಿದ್ದು ದೆಹಲಿಯ ತಿಹಾರ್ ಜೈಲಿಗೆ ಶರಣಾಗಿದ್ದಾರೆ.
ರಶೀದ್ ಅವರ ತಂದೆಯ ಆರೋಗ್ಯದ ಕಾರಣ ಮಧ್ಯಂತರ ಜಾಮೀನನ್ನು ಅ.
ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಎಂಜಿನಿಯರ್, 2019ರಿಂದ ಜೈಲಿನಲ್ಲಿದ್ದಾರೆ. ರಶೀದ್‌ಗೆ ಈ ಹಿಂದೆ, ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ನ್ಯಾಯಾಲಯವು ಜುಲೈ 5ರಂದು ಪೆರೋಲ್ ನೀಡಿತ್ತು.
ಅವಾಮಿ ಇತ್ತೆಹಾದ್ ಪಾರ್ಟಿಯ (ಎಐಪಿ) ಪ್ರಭಾವಿ ನಾಯಕರಾಗಿರುವ ರಶೀದ್ ಅವರು ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ಸ್ಪರ್ಧಿಸಿ, ಮಾಜಿ ಮುಖ್ಯಮಂತ್ರಿಯೂ ಆಗಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದ್ದರು. ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸಾಧಿಸಿದ ಗೆಲುವು, ಅವರ ಪ್ರಭಾವ ಏನೆಂಬುದನ್ನು ತೋರಿಸಿಕೊಟ್ಟಿತ್ತು.