ತಿರುವನಂತಪುರ: ಬಾಲ್ಯದಿಂದಲೇ ಮಕ್ಕಳಲ್ಲಿ ಜಾತ್ಯತೀತತೆಯ ಭಾವನೆಯನ್ನು ಮೂಡಿಸಬೇಕು ಎಂದು ಸಚಿವ ಪಿ.ಎ.ಮುಹಮ್ಮದ್ ರಿಯಾಝ್ ಹೇಳಿರುವರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಯುನಿಸೆಫ್ ಜಂಟಿಯಾಗಿ ಆಯೋಜಿಸಿದ್ದ ಶಾಸಕರು ಮತ್ತು ನೀತಿ ನಿರೂಪಣೆಯ ಮೇಲೆ ಪ್ರಭಾವ ಬೀರುವವರ ರಾಜ್ಯ ಮಟ್ಟದ ಸಮಾಲೋಚನಾ ಸಭೆಯನ್ನು ಸಚಿವರು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಕ್ಕಳ ಹಕ್ಕು ಕಾಯ್ದೆಯ ತಾಂತ್ರಿಕ ಅಂಶಗಳನ್ನು ಜನರಿಗೆ ಸರಳ ರೀತಿಯಲ್ಲಿ ಕಲಿಸಬೇಕು. ಈ ಪ್ರಕ್ರಿಯೆಯಲ್ಲಿ ಜನಪ್ರತಿನಿಧಿಗಳು ಪ್ರಮುಖ ಪಾತ್ರ ವಹಿಸಬಹುದು. ಪ್ರಜಾಸತ್ತಾತ್ಮಕ ಜಾತ್ಯತೀತ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿಕೊಡಬೇಕು.
ಗಮನ ಮತ್ತು ರಕ್ಷಣೆಯ ಅಗತ್ಯವಿರುವ ಮತ್ತು ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಮಕ್ಕಳ ಸಮಗ್ರ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಆಯೋಗದ ನಿರಂತರ ಮಧ್ಯಸ್ಥಿಕೆಗಳ ಭಾಗವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಕ್ಕಳ ಹಿತಾಸಕ್ತಿಗಳನ್ನು ಪರಿಗಣಿಸಿ ಅಗತ್ಯಗಳನ್ನು ಪೂರೈಸುವ ಮಕ್ಕಳ ಸ್ನೇಹಿ ಆಡಳಿತ ಮಾದರಿಯನ್ನು ಖಚಿತಪಡಿಸುವುದು ಆಯೋಗದ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.