ಕಾಸರಗೋಡು: ನಮ್ಮ ಪರಂಪರೆ ಮತ್ತು ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಹೆತ್ತವರು ಮತ್ತು ಪೋಷಕರು ಅರಿವುಮೂಡಿಸುವ ಕೆಲಸ ನಡೆಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್ ತಿಳಿಸಿದರು.
ಅವರು ಕಾಸರಗೋಡಿನ ಪಾಂಗೋಡು ಶ್ರೀ ದುರ್ಗಾಪರಮೇಶ್ವರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ದೇವಸ್ಥಾನದ ದುರ್ಗಾಂಬಾ ವೇದಿಕೆಯಲ್ಲಿ ನಡೆದ ಧಾರ್ಮಿಕ, ಸಾಂಸ್ಕøತಿಕ ಹಾಗೂ ಸಾಹಿತ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಾರ್ನಾಡು ಪದ್ಮನಾಭ ತಂತ್ತಿಗಳು ದೀಪ ಪ್ರಜ್ವಲಿಸಿದರು. ಕಾಸರಗೋಡಿನ ಮಲ್ಲಿಕಾರ್ಜುನ ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯ ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು.ಕಸಾಪ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಧಾರ್ಮಿಕ ಮುಖಂಡ ಅರಿಬೈಲ್ ಗೋಪಾಲ ಶೆಟ್ಟಿ, ಶ್ರೀಧರ ಶೆಟ್ಟಿ ಮುಟ್ಟಂ, ನಿವೃತ್ತ ಶಿಕ್ಷಕ ವಿಶಾಲಾಕ್ಷ ಪುತ್ರಕಳ, ನಗರಸಭಾ ಸದಸ್ಯೆ ಸವಿತಾ ಟೀಚರ್, ಸಂಧ್ಯಾರಾಣಿ ಟೀಚರ್, ಪತ್ರಕರ್ತರಾದ ಪ್ರದೀಪ್ ಬೇಕಲ್, ಗಂಗಾಧರ ಯಾದವ್, ಜಗನ್ನಾಥ ಪಿ.ಕೆ, ಜಯ ಮಣಿಯಂಪಾರೆ ಉಪಸ್ಥಿತರಿದ್ದರು. ಈ ಸಂದರ್ಭ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರು ಭಜನಾ ಗಾಯನೋತ್ಸವಕ್ಕೆ ಚಾಲನೆ ನೀಡಿದರು. ಕೆ.ವಾಮನ ರಾವ್ ಬೇಕಲ್ ಸ್ವಾಗತಿಸಿದರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ವಸಂತ ಕೆರೆಮನೆ ವಂದಿಸಿದರು.