HEALTH TIPS

ಪೂರ್ವ ಲಡಾಖ್‌ನ ಎಲ್‌ಎಸಿ ಉದ್ದಕ್ಕೂ ಗಸ್ತು: ಭಾರತ- ಚೀನಾ ಒಪ್ಪಂದ

        ವದೆಹಲಿ: ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಗಸ್ತು ತಿರುಗುವ ಕುರಿತು ಭಾರತ ಮತ್ತು ಚೀನಾದ ಸಂಧಾನಕಾರರು ಒಪ್ಪಂದಕ್ಕೆ ಬಂದಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸೋಮವಾರ ಹೇಳಿದ್ದಾರೆ.

       ಈ ಒಪ್ಪಂದವು ಡೆಪ್ಸಾಂಗ್ ಮತ್ತು ಡೆಮ್ಚೋಕ್ ಪ್ರದೇಶಗಳಲ್ಲಿ ಗಸ್ತು ತಿರುಗುವುದಕ್ಕೆ ಸಂಬಂಧಿಸಿದ್ದಾಗಿದೆ ಎಂದು ತಿಳಿದುಬಂದಿದೆ.


          ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಕಜಾನ್ ನಗರಕ್ಕೆ ಪ್ರಯಾಣಿಸುವ ಒಂದು ದಿನದ ಮೊದಲು ಈ ಮಹತ್ವದ ಬೆಳವಣಿಗೆ ನಡೆದಿದೆ.

       ಉಳಿದ ಸಮಸ್ಯೆಗಳನ್ನು ಪರಿಹರಿಸಲು ಕಳೆದ ಕೆಲವು ವಾರಗಳಿಂದ ಉಭಯ ರಾಷ್ಟ್ರಗಳ ಸಂಧಾನಕಾರರು ಸಂಪರ್ಕದಲ್ಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹೇಳಿದರು.

           ಉಭಯ ರಾಷ್ಟ್ರಗಳ ನಡುವಿನ ಈ ಒಪ್ಪಂದದ ಬಗ್ಗೆ ಅಧಿಕೃತ ಘೋಷಣೆ ಹೊರ ಬೀಳದಿದ್ದರೂ ಬ್ರಿಕ್ಸ್ ಶೃಂಗಸಭೆಯ ಸಂದರ್ಭ ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ನಡುವೆ ನಡೆಯುವ ದ್ವಿಪಕ್ಷೀಯ ಸಭೆಯಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆ ಇದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries