ಸುಲ್ತಾನ್‌ಪುರ: ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ಬೆಲಾಸದ ಹಳ್ಳಿಯ ಉದ್ಯಾನದಲ್ಲಿದ್ದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಶಕಗಳಿಂದ ಇಲ್ಲಿನ ಅಂಬೇಡ್ಕರ್ ಪಾರ್ಕ್‌ನಲ್ಲಿದ್ದ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ.
ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಗುರುವಾರ ಬೆಳಿಗ್ಗೆ ಪ್ರತಿಮೆ ಧ್ವಂಸಗೊಂಡಿರುವುದನ್ನು ಗಮನಿಸಿದ ಗ್ರಾಮಸ್ಥರು, ಪೊಲಲೀಸರಿಗೆ ಮಾಹಿತಿ ನೀಡಿದ್ದಾರೆ.
'ಹಾನಿಗೊಳಗಾಗಿದ್ದ ಪ್ರತಿಮೆಯನ್ನು ರಿಪೇರಿ ಮಾಡಲಾಗಿದ್ದು, ಪ್ರಕರಣ ಕುರಿತಂತೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನಿನ ಅನ್ವಯ ಕ್ರಮ ಕೈಗೊಳ್ಳುತ್ತೇವೆ'ಎಂದು ಕೊತ್ವಾಲಿ ದೆಹತ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸತ್ಯೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.