ನವದೆಹಲಿ: ನವೆಂಬರ್ 14ರಿಂದ 24ರವರೆಗೆ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಉತ್ಸವದಲ್ಲಿ ಭಾಗಿಯಾಗಲು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿದೆ.
ನವದೆಹಲಿ: ನವೆಂಬರ್ 14ರಿಂದ 24ರವರೆಗೆ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರ ಉತ್ಸವದಲ್ಲಿ ಭಾಗಿಯಾಗಲು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿದೆ.
'ನನ್ನ ಸಾಕ್ಷ್ಯಚಿತ್ರವು ಪ್ರಶಸ್ತಿಗೆ ಭಾಜನವಾಗಿದ್ದು ಕಾರ್ಯಕ್ರಮ ಆಯೋಜಕರಿಂದ ಆಹ್ವಾನ ಬಂದಿದೆ.ಹೀಗಾಗಿ ಆಮ್‌ಸ್ಟರ್‌ಡ್ಯಾಮ್‌ಗೆ ತೆರಳಲು ಅನುಮತಿ ನೀಡಬೇಕು' ಎಂದು ಸೆಟಲ್ವಾಡ್ ಅವರು ನ್ಯಾಯಾಲಯವನ್ನು ಕೋರಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನು ಒಳಗೊಂಡ ನ್ಯಾಯಪೀಠವು, ಕಾರ್ಯಕ್ರಮಕ್ಕೆ ತೆರಳಲು ಅನುಮತಿ ನೀಡಿತು.
2002ರ ಗೋಧ್ರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಲು ದಾಖಲೆಗಳನ್ನು ತಿರುಚಿದ್ದ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ 2023ರ ಜುಲೈನಲ್ಲಿ ಸೆಟಲ್ವಾಡ್ ಅವರಿಗೆ ಜಾಮೀನು ನೀಡಿದೆ.
ಇದಕ್ಕೂ ಮುನ್ನ ಆಗಸ್ಟ್ 20ರಂದು, ಸೆಟಲ್ವಾಡ್ ಅವರಿಗೆ ಮಲೇಷ್ಯಾಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು.