ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲೀಯರು ಕಚ್ಚಾ ಬಾಂಬ್ ಸ್ಫೋಟಿಸಿದ್ದು, ಇಂಡೊ-ಟಿಬೆಟನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಯ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಇತರ ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಬೂಝಮಾಢ ಪ್ರದೇಶದ ಕೊಡ್ಲಿಯಾರ್ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎಂದು ಬಸ್ತಾರ್ ವಲಯದ ಐಜಿಪಿ ಸುಂದರ ರಾಜ್ ಹೇಳಿದ್ದಾರೆ.
ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಐಟಿಬಿಪಿ, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ರಾಜ್ಯ ಪೊಲೀಸ್ ಇಲಾಖೆಯ ಜಿಲ್ಲಾ ಮೀಸಲು ಪಡೆ ಮತ್ತಿತರ ಪಡೆಗಳ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಕಾರ್ಯಾಚರಣೆ ನಡೆಸಿ ಹಿಂದಿರುಗುವಾಗ ಸ್ಫೋಟ ಆಗಿದೆ. ನಾಲ್ಕು ಮಂದಿ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಐಟಿಬಿಪಿ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಮೃತಪಟ್ಟರು.
ಏಳು ಜಿಲ್ಲೆಗಳಿರುವ ಬಸ್ತಾರ್ ವಲಯದಲ್ಲಿ ಈ ವರ್ಷ ನಕ್ಸಲ್ ಸಂಬಂಧಿ ಘಟನೆಗಳಲ್ಲಿ 17 ಮಂದಿ ಪೊಲೀಸರು ಅಸುನೀಗಿದ್ದಾರೆ. ಇದೇ ಅವಧಿಯಲ್ಲಿ ನಡೆದ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳ ಗುಂಡಿಗೆ 189 ಮಂದಿ ನಕ್ಸಲೀಯರು ಮೃತಪಟ್ಟಿದ್ದಾರೆ.