ಕರೀಂನಗರ : ಆಡಳಿತಾರೂಢ ಕಾಂಗ್ರೆಸ್ ನಾಯಕನನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ತೆಲಂಗಾಣದ ಜಗ್ತಿಯಾಲ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರೀಂನಗರ : ಆಡಳಿತಾರೂಢ ಕಾಂಗ್ರೆಸ್ ನಾಯಕನನ್ನು ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ತೆಲಂಗಾಣದ ಜಗ್ತಿಯಾಲ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಗಾರೆಡ್ಡಿ (56) ಮೃತ ಕಾಂಗ್ರೆಸ್ ನಾಯಕ.
ಸದ್ಯ ಮೃತದೇಹವನ್ನು ಜಗ್ತಿಯಾಲದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇವರು ಎಂಎಲ್‌ಸಿ ಜೀವನ್ ರೆಡ್ಡಿ ಅವರ ಆಪ್ತರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಹಳೆಯ ವೈಷಮ್ಯದಿಂದ ಕೊಲೆ ನಡೆದಿರಬಹುದು. ಆರೋಪಿ ತಲೆಮರೆಸಿಕೊಂಡಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.