ನವದೆಹಲಿ: ಕೇರಳ ಹೈಕೋರ್ಟ್‍ಗೆ ನಾಲ್ವರು ಹೊಸ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ಶಿಫಾರಸು ಮಾಡಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ನಾಲ್ವರು ನ್ಯಾಯಾಂಗ ಅಧಿಕಾರಿಗಳನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಶಿಫಾರಸು ನೀಡಿದೆ.
ಕೆ.ವಿ ಜಯಕುಮಾರ್, ಎಸ್. ಮುರಳಿಕೃಷ್ಣ, ಜೋಬಿನ್ ಸೆಬಾಸ್ಟಿಯನ್, ಪಿ.ವಿ. ಬಾಲಕೃಷ್ಣನ್ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಇತರರನ್ನು ಒಳಗೊಂಡ ಕೊಲಿಜಿಯಂ ಈ ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ.
ಈ ಹಿಂದೆ ಇಬ್ಬರು ಹಿರಿಯ ಸಹೋದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಈ ಶಿಫಾರಸು ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.