ಕುಂಬಳೆ: ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನ ತರಗತಿ ಕಟ್ಟಡದ ಉದ್ಘಾಟನೆ ಶುಕ್ರವಾರ ನಡೆಯಿತು. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ನೂತನ ಕಟ್ಟಡ ಉದ್ಘಾಟಿಸಿದರು. ಪುತ್ತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಡಿ ಸುಬ್ಬಣ್ಣ ಆಳ್ವ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಿವೃತ್ತ ಡಿಡಿಇ ನಂದಿಕೇಶನ್ ಅವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯತಿ ಸದಸ್ಯ ನಾರಾಯಣ ನಾಯ್ಕ್, ಪುತ್ತಿಗೆ ಗ್ರಾಮ ಪಂಚಾಯತಿ ಸದಸ್ಯೆ ಅನಿತಾಶ್ರೀ, ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ ವಿ, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಶಶಿಧರ ಎಂ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಬು ಪಿ, ಮಾತೃ ಸಂಘದ ಅಧ್ಯಕ್ಷೆ ಆಶಿಯತ್ ಅಸೀದ ಎ ಎಂ, ಗುತ್ತಿಗೆದಾರ ಮೊಹಮ್ಮದ್ ಅಶ್ರಫ್, ಸಿಪಿಎಂ ಲೋಕಲ್ ಏರಿಯ ಸೆಕ್ರೆಟರಿ ಅಬ್ದುಲ್ ಹಕೀಂ, ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಅನಂತಪುರ ಶುಭಾಶಂಸನೆಗೈದರು. ಮುಖ್ಯ ಶಿಕ್ಷಕಿ ಸುನೀತ ಎಂ ಸ್ವಾಗತಿಸಿ,ನೌಕರ ಸಂಘದ ಕಾರ್ಯದರ್ಶಿ ಕಿರಣ್ ಕೆ. ವಂದಿಸಿದರು. ಗೀತ ಕೆ ಕಾರ್ಯಕ್ರಮ ನಿರ್ವಹಿಸಿದರು.