ಕಾಸರಗೋಡು: ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಾಗೂ ಚಿತ್ರಗಳನ್ನು ಪ್ರಚಾರಪಡಿಸಿದ ಮಂಗಲ್ಪಾಡಿ ಶಿರಿಯ ಕುನ್ನಿಲ್ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಕುಂಬಳೆ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಒಂದು ಧರ್ಮದವರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಸಂದೇಶ ಹಾಗೂ ಚಿತ್ರಗಳನ್ನು ವ್ಯಾಪಕವಾಗಿ ಪ್ರಚಾರಪಡಿಸಿರುವ ಪ್ರಕರಣಕ್ಕೆ ಸಂಬಂಧಿಸ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 153 ಪ್ರಕಾರ ಕೇಸು ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.