HEALTH TIPS

ಸಚಿತಾ ರೈ ವಿರುದ್ಧ ಮತ್ತೊಂದು ಕೇಸು-ಹದಿನಾರಕ್ಕೇರಿದ ಪ್ರಕರಣಗಳ ಸಂಖ್ಯೆ

ಕಾಸರಗೋಡು: ಉದ್ಯೋಗ ಭರವಸೆ ನೀಡಿ ಹಲವರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿರುವ ಪ್ರಕರಣದ ಆರೋಪಿ, ಮಾಜಿ ಡಿವೈಎಫ್‍ಐ ನೇತಾರೆ ಹಾಗೂ ಪುತ್ತಿಗೆ ಪಂಚಾಯಿತಿ ಬಾಡೂರು ಎಎಲ್‍ಪಿ ಶಾಲಾ ಶಿಕ್ಷಕಿ ಸಚಿತಾ ರೈ (27) ವಿರುದ್ಧ ಮತ್ತೊಂದು ಕೇಸು ದಾಖಲಾಗಿದೆ. ಕಾಸರಗೋಡು ನಗರ  ಪೊಲೀಸ್ ಠಾಣೆ ವ್ಯಾಪ್ತಿಯ ಮೊಗ್ರಾಲ್‍ಪುತ್ತೂರು ಕಡವತ್ ನಿವಾಸಿ ಸಫೀಬತ್ ಶಿಫಾಬ ಅವರು ನೀಡಿದ ದೂರಿನ ಮೇರೆಗೆ ಈ ಕೇಸು. ಸಚಿತಾ ರೈ ಹಾಗೂ ನಫೀಸತ್ ಶಿಫಾಬ ಸಹಪಾಠಿಗಳಾಗಿದ್ದರು. ಈ  ಹಿನ್ನೆಲೆಯಲ್ಲಿ ಸ್ನೇಹಬೆಳೆಸಿಕೊಂಡಿದ್ದ ಸಚಿತಾ ರೈ, ಸಿಪಿಸಿಆರ್‍ಐನಲ್ಲಿ ಕೆಲಸ ದೊರಕಿಸಿಕೊಡುವ ಭರವಸೆಯೊಂದಿಗೆ ಒಂದು 1.40ಲಕ್ಷ ರೂ. ಪಡೆದು ಕೆಲಸ ನೀಡದೆ, ಹಣವನ್ನೂ ವಾಪಾಸುಮಾಡದೆ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಮೂಲಕ ಸಚಿತಾ ರೈ ವಿರುದ್ಧದ ಪ್ರಕರಣಗಳ ಸಂಖ್ಯೆ 16ಕ್ಕೇರಿದೆ.  

ವಂಚನಾ ಪ್ರಕರಣಕ್ಕೆ ಸಂಬಂಧಿಸಿ ಸಚಿತಾ ರೈಗೆ ಕಾಸರಗೋಡು ಜ್ಯುಡಿಶಿಯಲ್ ಪ್ರಥಮ ದರ್ಜೆ ನ್ಯಾಯಾಲಯ(ಪ್ರಥಮ)ನ್ಯಾಯಾಂಗ ಬಂಧನ ವಿಧಿಸಿದ್ದು, ಪ್ರಸಕ್ತ ಕಣ್ಣೂರು ಕೇಂದ್ರ ಕಾರಾಗೃಹದಲ್ಲಿ ಕಳೆಯುತ್ತಿದ್ದಾಳೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries