ಪಟ್ನಾ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಶಾಲೆಯೊಂದರ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ವಿದ್ಯಾರ್ಥಿಯೊಬ್ಬನನ್ನು ಸ್ನೇಹಿತರು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟ್ನಾ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಶಾಲೆಯೊಂದರ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ವಿದ್ಯಾರ್ಥಿಯೊಬ್ಬನನ್ನು ಸ್ನೇಹಿತರು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
'ಸೌರಭ್ ಕುಮಾರ್ ಒಂದು ಗುಂಪಿನಲ್ಲಿ ಗುರುತಿಸಿಕೊಂಡಿದ್ದ. ಇನ್ನೊಂದು ಗುಂಪಿನಲ್ಲಿದ್ದ ಆರೋಪಿಗಳು ಸೌರಭ್ ತಲೆಗೆ ಕೋಲಿನಿಂದ ಬಲವಾಗಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ' ಎಂದು ವಿದ್ಯಾಸಾಗರ್ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.