ಬದಿಯಡ್ಕ: ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಬದಿಯಡ್ಕ ವಲಯ ಸಮಿತಿಯನ್ನು ರೂಪಿಸಲಾಯಿತು. ಬದಿಯಡ್ಕ ಗಣೇಶಮಂದಿರದಲ್ಲಿ ಬುಧವಾರ ಜರಗಿದ ಸಭೆಯಲ್ಲಿ ನರೇಂದ್ರ ಬಿ.ಎನ್. ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು.
ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಮಾಸ್ತರ್ ಕಾರ್ಯಕ್ರಮದ ರೂಪುರೇಷೆಯನ್ನು ವಿವರಿಸಿ ಪುರಾತನವಾದ ದೇವಸ್ಥಾನದ ಐತಿಹ್ಯವನ್ನು ತಿಳಿಸಿದರು. ಶ್ರೀ ಉಮಾಮಹೇಶ್ವರ ಸೇವಾ ಸಮಿತಿಯ ಅಧ್ಯಕ್ಷ ತಲೇಕ ಸುಬ್ರಹ್ಮಣ್ಯ ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಿತ್ಯಾನಂದ ಶೆಣೈ ಬದಿಯಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಅಧ್ಯಾಪಕ ಗುರುಪ್ರಸಾದ್ ರೈ ಸ್ವಾಗತಿಸಿ, ರಾಜೇಶ್ ಬಿ.ಕೆ.ವಂದಿಸಿದರು. ಊರಿನ ಭಗವದ್ಭಕ್ತರು ಉಪಸ್ಥಿತರಿದ್ದರು. ವಲಯ ಸಮಿತಿಯನ್ನು ರೂಪಿಸಲಾಯಿತು.