ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತಿ ಇಂಜಿನಿಯರಿಂಗ್ ವಿಭಾಗದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಓವರ್ಸೀರ್ (ಸಿವಿಲ್) ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ/ಡಿಗ್ರಿ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅ,14 ರಂದು ಮಧ್ಯಾಹ್ನ 2 ಗಂಟೆಯ ಮೊದಲು ಬಿಳಿ ಹಾಳೆಯಲ್ಲಿ ಸ್ವಯಂ-ಸಿದ್ಧಪಡಿಸಿದ ಅರ್ಜಿ ಮತ್ತು ಅರ್ಹತೆಯನ್ನು ಸಾಬೀತುಪಡಿಸುವ ಪ್ರಮಾಣ ಪತ್ರಗಳೊಂದಿಗೆ ಗ್ರಾಮ ಪಂಚಾಯಿತಿ ಕಚೇರಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಳಿಗಾಗಿ ಪಂಚಾಯಿತಿ ಕಚೇರಿಯಲ್ಲಿ ಸಂದರ್ಶಿಸಿಸಲು ಸೂಚಿಸಲಾಗಿದೆ.