ಓಸ್ಲೋ: ಜಪಾನ್‌ನ 'ನಿಹಾನ್ ಹಿಡಾಂಕ್ಯೊ' ಸಂಸ್ಥೆಗೆ 2024ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಪರಮಾಣು ಶಸ್ತ್ರಾಸ್ತ್ರ ಮುಕ್ತ ಜಗತ್ತನ್ನು ನಿರ್ಮಿಸಲು ದಣಿವರಿಯದ ಪ್ರಯತ್ನಗಳಿಗಾಗಿ ಈ ಬಹುಮಾನವನ್ನು ನೀಡಲಾಗಿದೆ ಎಂದು ನೊಬೆಲ್ ಸಮಿತಿಯ ಅಧ್ಯಕ್ಷ ಜಾರ್ಗೆನ್ ವಾಟ್ನೆ ಫ್ರೈಡ್ನೆಸ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ನಿಹಾನ್ ಹಿಡಾಂಕ್ಯೊ ಸಹ ಮುಖ್ಯಸ್ಥರು, ನೊಬೆಲ್ ಗೆಲ್ಲುತ್ತೇವೆ ಎಂದು ಕನಸು ಕಂಡಿರಲಿಲ್ಲ ಎಂದು ಹೇಳಿದ್ದಾರೆ.
ಜಪಾನಿನ ಹಿರೋಷಿಮಾ ಮತ್ತು ನಾಗಸಾಕಿ ನಗರಗಳ ಮೇಲೆ ಅಮೆರಿಕ ನಡೆಸಿದ ಪರಮಾಣು ದಾಳಿಯ ಸಂತ್ರಸ್ತರ ಬಗ್ಗೆ ಅನೇಕ ಸಾಕ್ಷ್ಯ ಚಿತ್ರಗಳನ್ನು ಈ ಸಂಸ್ಥೆ ನಿರ್ಮಿಸಿದೆ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಯಾವ ದೇಶವು ಪರಮಾಣು ದಾಳಿ ನಡೆಸಬಾರದು ಎಂದೂ ಮನವಿ ಮಾಡಿದೆ.