ಪಿಲಿಬಿಟ್: ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದಡಿ ಬಲಪಂಥೀಯ ಸಂಘಟನೆ ಭಜರಂಗದಳದ ಇಬ್ಬರು ಕಾರ್ಯಕರ್ತರ ವಿರುದ್ಧ ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಿಲಿಬಿಟ್: ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದಡಿ ಬಲಪಂಥೀಯ ಸಂಘಟನೆ ಭಜರಂಗದಳದ ಇಬ್ಬರು ಕಾರ್ಯಕರ್ತರ ವಿರುದ್ಧ ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳನ್ನು ಸಂಜಯ್ ಮಿಶ್ರಾ ಹಾಗೂ ವಿವೇಕ್ ಮಿಶ್ರಾ ಎಂದು ಗುರುತಿಸಲಾಗಿದೆ.
ಅ. 13ರಂದು ಮಧೋತಾಂಡಾ ಪಟ್ಟಣದಲ್ಲಿ ನಡೆದ ಘಟನೆ ಆಧರಿಸಿ ಅಫ್ಜಲ್ ಖಾನ್ ಎಂಬುವವರು ದೂರು ನೀಡಿದ್ದರು.
' ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ಭಜರಂಗದಳದ ಮುಖಂಡರಾದ ಸಂಜಯ್ ಮಿಶ್ರಾ ಹಾಗೂ ವಿವೇಕ್ ಮಿಶ್ರಾ ಅವರು ತಮ್ಮ ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷ ಬಿತ್ತುವ ಹಾಗೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದನ್ನು ಸ್ಥಳದಲ್ಲಿದ್ದ ಕೆಲ ಮುಸ್ಲಿಮರು ಖಂಡಿಸಿದ್ದರು. ಘಟನಾ ಸ್ಥಳದಲ್ಲಿದ್ದ ಪೊಲೀಸರು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಭರವಸೆ ನೀಡಿ ಎರಡೂ ಗುಂಪುಗಳನ್ನು ಚದುರಿಸಿದ್ದರು' ಎಂದು ಇನ್‌ಸ್ಪೆಕ್ಟರ್ ಪರನ್ಪುರ್ ವಿಶಾಲ್ ಚೌಧರಿ ತಿಳಿಸಿದ್ದಾರೆ.
ಇಬ್ಬರು ಆರೋಪಿಗಳು ಮಾಡಿರುವ ಭಾಷಣದ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅಫ್ಜಲ್ ಅವರು ನೀಡಿದ ಲಿಖಿತ ದೂರು ಮತ್ತು ಹರಿದಾಡುತ್ತಿರುವ ವಿಡಿಯೊ ದೃಶ್ಯ ಆಧರಿಸಿ ದೂರು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ನಡೆಸಲಾಗುವುದು ಎಂದಿದ್ದಾರೆ.